ಕೋಲ್ಕತ್ತಾ: ಬರ್ದ್ವಾನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕೋವಿಡ್ ವಾರ್ಡ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೋವಿಡ್ ಸೋಂಕಿತ ಸಾವನ್ನಪ್ಪಿದ್ದಾನೆ. ಇದರಿಂದ ಹಲವಾರು ಮಂದಿ ಗಾಬರಿಗೊಂಡಿದ್ದಾರೆ.
ಮೃತ ಸೋಂಕಿತ ಪೂರ್ವ ಬರ್ದ್ವಾನ್ ಜಿಲ್ಲೆಯ ನಿವಾಸಿ ಸಂಧ್ಯಾ ರಾಯ್ (60) ಎಂದು ಗುರುತಿಸಲಾಗಿದೆ. ಆಸ್ಪತ್ರೆಯೆ ರಾಧಾರಾಣಿ ವಾರ್ಡ್‍ನಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕೊರೊನಾ ಹೆಚ್ಚಾದಾಗಲಿಂದ ಇದನ್ನು ಕೋವಿಡ್ ವಾರ್ಡ್ ಆಗಿ ಪರಿವರ್ತಿಸಲಾಗಿದೆ. ಬೆಂಕಿ ಕಾಣಿಸಿಕೊಂಡಾಗ ಆರಂಭದಲ್ಲಿ ರೋಗಿಯ ಸಂಬಂಧಿಕರು ಬೆಂಕಿ ನಂದಿಸಲು ಯತ್ನಿಸಿದರು. ನಂತರ ಸ್ಥಳಕ್ಕೆ ಪೊಲೀಸರು ಆಗಮಿಸಿ ಅಗ್ನಿಶಾಮಕ ದಳವನ್ನು ಕರೆಸಲಾಯಿತು. ಇದನ್ನೂ ಓದಿ: ಗಟ್ಟಿಮೇಳ ಸೀರಿಯಲ್ ಖ್ಯಾತಿಯ ನಟ ರಕ್ಷಿತ್ ಆಯಂಡ್ ಗ್ಯಾಂಗ್‌ನಿಂದ ರಂಪಾಟ
Advertisement
Advertisement
ಒಂದು ಗಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯ ಪೂರ್ಣಗೊಂಡ ಬಳಿಕ ಆಸ್ಪತ್ರೆ ತಮ್ಮ ಕಡೆಯಿಂದ ಯಾವುದೇ ತಪ್ಪಿಲ್ಲ ಎಂದು ಹೇಳುತ್ತಿದೆ. ಹೀಗಾಗಿ ಘಟನೆ ಕುರಿತಂತೆ ತನಿಖೆ ನಡೆಸಲು 5 ಸದಸ್ಯರ ತನಿಖಾ ತಂಡವನ್ನು ರಚಿಸಲಾಗಿದ್ದು, ಫೋರೆನ್ಸಿಕ್ ತನಿಖೆಯನ್ನೂ ನಡೆಸಲಾಗುವುದಾಗಿ ಬರ್ದ್ವಾನ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ರಾಂಶುಪಾಲ ಪ್ರಬೀರ್ ಸೇನ್‍ಗುಪ್ತಾ ತಿಳಿಸಿದ್ದಾರೆ. ಇದನ್ನೂ ಓದಿ: ಸಂಗೀತ್ ಕಾರ್ಯಕ್ರಮದಲ್ಲಿ ಸೂರಜ್ ಜೊತೆ ಮೌನಿ ರಾಯ್ ಲಿಪ್‍ಲಾಕ್
Advertisement
Advertisement