ಆನೇಕಲ್ (ಬೆಂಗಳೂರು): ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತ (Fire Cracker Tragedy In Attibele) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗೋದಾಮು ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ಪಟಾಕಿ ಸಂಗ್ರಹಕ್ಕೆ ಲೈಸೆನ್ಸ್ ಇರಲಿಲ್ಲ. ಕೇವಲ ಬೇರೆಡೆಗೆ ರವಾನಿಸುವ ಪ್ರೊಸೆಸಿಂಗ್ ಯೂನಿಟ್‍ಗೆ ಮಾತ್ರ ಪರವಾನಿಗೆ ನೀಡಲಾಗಿತ್ತು. ಆದರೆ ಮಾಲೀಕ ಭಾರೀ ಪ್ರಮಾಣದ ಪಟಾಕಿ ಸಂಗ್ರಹಿಸುವ ದಾಸ್ತಾನು ಮಳಿಗೆಯನ್ನಾಗಿ ಬಳಕೆ ಮಾಡ್ತಿದ್ದ. ಪ್ರೊಸೆಸಿಂಗ್ ಯೂನಿಟ್‍ಗೆ 2028ವರೆಗೆ ಪರವಾನಿಗೆ ಇದ್ದು, ಗೋದಾಮಿಗೆ ಅನುಮತಿ ಇರಲಿಲ್ಲ.
ಅಕ್ರಮವಾಗಿ ದೊಡ್ಡ ಪ್ರಮಾಣದಲ್ಲಿ ಪಟಾಕಿಯನ್ನು ಸಂಗ್ರಹಿಸಿದ್ದ ಕುರಿತು ಗೋದಾಮಿನ ಮಾಲೀಕರ ವಿರುದ್ಧ ಪ್ರತ್ಯೇಕವಾಗಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಮಾಲೀಕ ರಾಮಸ್ವಾಮಿ ರೆಡ್ಡಿಯನ್ನ ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ. 2018 ರಲ್ಲಿ ಪಟಾಕಿ ಅಂಗಡಿಕಷ್ಟೇ ಅನುಮತಿ ಪಡೆದಿದ್ದಾರೆ. ಗೋದಾಮಿಗೆ ಅನುಮತಿ ನೀಡಿಲ್ಲ ಎಂದು ರಾಮಸ್ವಾಮಿ ವಿಚಾರಣೆ ಬಳಿಕ ಬೆಳಕಿಗೆ ಬಂದಿದೆ.
ಒಟ್ಟಿನಲ್ಲಿ ಪಟಾಕಿ ಅಂಗಡಿ ಅನುಮತಿ ಪಡೆದು ಗೋಡೌನ್ ಮಾಡಿಕೊಂಡಿದ್ದ ಆರೋಪಿ ರಾಮಸ್ವಾಮಿ ವಿರುದ್ಧ ಸ್ಫೋಟಕ ಕಾಯ್ದೆ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಹಾವೇರಿ, ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ: ಬೊಮ್ಮಾಯಿ
ಪಟಾಕಿ ದುರಂತದಲ್ಲಿ ತಮಿಳುನಡು ಮೂಲದ ಗಿರಿ ಬಿನ್ ವೇಡಿಯಪ್ಪನ್, ಸಚೀನ್ ಬಿನ್ ಲೇಟ್ ವೇಡಿಯಪ್ಪನ್, ವಿಜಯರಾಘವನ್, ವಿಳಂಬರತಿ ಬಿನ್ ಸೆಂದಿಲ್, ಆಕಾಶ ಬಿನ್ ರಾಜಾ, ವೆಡಿಯಪ್ಪನ್, ಆದಿಕೇಶವ ಬಿನ್ ಪೆರಿಯಾಸ್ವಾಮಿ, ಪ್ರಕಾಶ್ ಬಿನ್ ರಾಮು, ವಸಂತರಾಜು ಬಿನ್ ಗೋವಿಂದ ರಾಜು, ಅಬ್ಬಾಸ್ ಬಿಸ್ ಶಂಕರ್, ಪ್ರಭಾಕರನ್ ಬಿನ್ ಗೋಪಿನಾಥ್, ನಿತೀಶ್ ಬಿನ್ ಮೇಘನಾಥ್, ಸಂತೋಷ್ ಬಿನ್ ಕುಮಾರ್ ಮೃತಪಟ್ಟಿದ್ದು, ಇನ್ನೊಬ್ಬನ ಹೆಸರು ಗುರುತು ಪತ್ತೆಯಾಗಿಲ್ಲ.
Web Stories