ಭೋಪಾಲ್: ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್ (Gwalior) ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. 190ಕ್ಕೂ ಹೆಚ್ಚು ರೋಗಿಗಳನ್ನು ರಕ್ಷಿಸಲಾಗಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಜ್ರಾ ರಾಜ ವೈದ್ಯಕೀಯ ಕಾಲೇಜಿನ ಭಾಗವಾಗಿರುವ ಕಮಲ ರಾಜ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ತೀವ್ರ ನಿಗಾ ಘಟಕದಲ್ಲಿ ಇಂದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು ಎಂದು ಗ್ವಾಲಿಯರ್‌ನ ಜಿಲ್ಲಾಧಿಕಾರಿ ರುಚಿಕಾ ಚೌಹಾಣ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾರು ಬಿಟ್ಟು ಬಸ್‍ನಲ್ಲಿ ಸಂಚರಿಸಿ ಮಲೆನಾಡ ಸೌಂದರ್ಯ ಸವಿದ ತೇಜಸ್ವಿ ಸೂರ್ಯ ದಂಪತಿ
ಆಸ್ಪತ್ರೆಯ ಸಿಬ್ಬಂದಿ ತಕ್ಷಣ ಕಿಟಕಿಗಳನ್ನು ಒಡೆದು ಐಸಿಯುನಲ್ಲಿದ್ದ 13 ರೋಗಿಗಳೂ ಸೇರಿದಂತೆ ಆಸ್ಪತ್ರೆಯಲ್ಲಿದ್ದ 190ಕ್ಕೂ ಹೆಚ್ಚು ರೋಗಿಗಳನ್ನು ಸುರಕ್ಷಿತವಾಗಿ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹೌತಿ ಉಗ್ರರ ಮೇಲೆ ಅಮೆರಿಕ ಏರ್‌ಸ್ಟ್ರೈಕ್, 31 ಬಲಿ – ನರಕ ತೋರಿಸ್ತೀವಿ ಎಂದು ಗುಡುಗಿದ ಟ್ರಂಪ್
ಶಾರ್ಟ್ ಸರ್ಕ್ಯೂಟ್‌ನಿಂದ ಕಮಲ ರಾಜ ಆಸ್ಪತ್ರೆಯ ಸ್ತ್ರೀರೋಗ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿದ್ದ 190 ರೋಗಿಗಳನ್ನು ಸುರಕ್ಷಿತವಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.