ಕೋಲಾರ: ಶಾರ್ಟ್ ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿ (Textile Shop) ಬೆಂಕಿಗೆ ಆಹುತಿಯಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರದ ಎಂ.ಜಿ.ರಸ್ತೆಯಲ್ಲಿರುವ ಬ್ರಾಂಡೆಡ್ ಫ್ಯಾಕ್ಟರಿ ಅಂಗಡಿಗೆ ಬೆಂಕಿ ಬಿದ್ದು ಅಂಗಡಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿದೆ. ಬಟ್ಟೆ ವ್ಯಾಪಾರಿ ಹಾಗೂ ಮಾಲೀಕ ಇಕ್ರಂ ಪಾಷಾ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಮಧ್ಯಾಹ್ನ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿಯಲ್ಲಿದ್ದ 20ರಿಂದ 25 ಲಕ್ಷ ರೂ. ಮೌಲ್ಯದ ಬಟ್ಟೆಗಳು ಹಾಗೂ ಕೆಲ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ತರಾತುರಿ ಜಾತಿಗಣತಿ, ಜಾತಿಗಳ ಜೊತೆ ಕ್ರಿಶ್ಚಿಯನ್ ಧರ್ಮ ಸೇರಿಸುವುದು ಬೇಡ: ನಿರ್ಮಲಾನಂದ ಶ್ರೀಗಳ ಎಚ್ಚರಿಕೆ
ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಬೆಂಕಿ ಧಗಧಗವೆಂದು ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಕಟ್ಟಡಗಳಿಗೆ ಆವರಿಸುವ ಮೂಲಕ ಆತಂಕ ಮನೆಮಾಡಿತ್ತು. ಅಲ್ಲದೆ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಲು ಕೆಲ ಕಾಲ ಹರಸಾಹಸ ಪಡಬೇಕಾಗಿತ್ತು. ಇನ್ನು ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸಿಎಂ ಆಗೋಕೆ ಹೆಲಿಕಾಪ್ಟರ್ ಖರೀದಿಸಿದ್ದಾರೆ ಅನ್ನೋದು ತಪ್ಪು ಕಲ್ಪನೆ – ಸತೀಶ್ ಜಾರಕಿಹೊಳಿ ಪರ ಬೋಸರಾಜು ಬ್ಯಾಟಿಂಗ್