ಗದಗ: ರೈತರ ಹೊಟ್ಟು, ಮೇವಿನ ಬಣವೆಗಳು ಹಾಗೂ ಕೃಷಿ ಸಲಕರಣೆಗಳು ಬೆಂಕಿಗಾಹುತಿಯಾಗಿರುವ ಘಟನೆ ಶಿರಹಟ್ಟಿ (Shirahatti) ತಾಲೂಕಿನ ಹೆಬ್ಬಾಳ (Hebbal) ಗ್ರಾಮದಲ್ಲಿ ನಡೆದಿದೆ.
ಸುಮಾರು 40ಕ್ಕೂ ಅಧಿಕ ಹೊಟ್ಟು, ಮೇವಿನ ಬಣವೆಗಳು ಬೆಂಕಿಗಾಹುತಿಯಾಗಿವೆ. ಕಿಡಿಗೇಡಿಗಳು ಬಣವೆಗೆ ಬೆಂಕಿ ಹಚ್ಚಿರುವ ಕುರಿತು ರೈತರು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ – ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ
ಊರ ಹೊರವಲಯದ ಬಯಲು ಜಾಗದಲ್ಲಿ ಗ್ರಾಮದ ರೈತರು ಒಂದೇ ಕಡೆ 40ಕ್ಕೂ ಅಧಿಕ ಬಣವೆಗಳನ್ನು ಹಾಕಲಾಗಿತ್ತು. ಏಕಾಏಕಿ ಹತ್ತಾರು ಬಣವೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ಬೆಂಕಿ ನಂದಿಸಲು ಮುಂದಾದರು. ಅಷ್ಟರಲ್ಲಾಗಲೇ ಬಣವೆಗಳು ಸುಟ್ಟು ಹೋಗಿದ್ದವು. ಅಗ್ನಿಶಾಮಕ ದಳ ಸಿಬ್ಬಂದಿಗಳು ತಡವಾಗಿ ಬಂದಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ನಿಂದ SCSP, TSP ಹಣ ಗ್ಯಾರೆಂಟಿಗೆ ಬಳಕೆ – ಕೋಲಾರ ಬಿಜೆಪಿ ಮುಖಂಡರಿಂದ ಖಂಡನೆ
ರೈತರು ತಮ್ಮ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವಿನ ಬಣವೆಗಳು ಸುಟ್ಟು ಭಸ್ಮವಾಗಿವೆ. ಬೇಸಿಗೆ ಸಂದರ್ಭದಲ್ಲಿ ಹೊಟ್ಟು, ಮೇವು ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ರೈತರ ಕೃಷಿ ಸಲಕರಣೆಗಳು ಸುಟ್ಟಿವೆ. ಲಕ್ಷಾಂತರ ರೂ. ಹಾನಿಯಾಗಿದ್ದು, ಅನ್ನದಾತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಬೇಡಿಕೊಂಡಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್‌ಗೆ ಗುಡ್ ನ್ಯೂಸ್- ‘ಮುದ್ದು ಸೊಸೆ’ಗೆ ತ್ರಿವಿಕ್ರಮ್ ಹೀರೋ
ಈ ಘಟನೆ ಜಿಲ್ಲೆಯ ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.