ಪಾಟ್ನಾ: ಬಿಹಾರದ (Bihar) ಮುಜಫರಾಪುರ್‌ನಲ್ಲಿನ (Muzaffarpur) ಆಸ್ಪತ್ರೆಯೊಂದರ ಐಸಿಯುನಲ್ಲಿ (ICU) ಬೆಂಕಿ ಅವಘಡ ಸಂಭವಿಸಿದ್ದು, ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮುಜಫರಾಪುರ್‌ನ (Muzaffarpur) ಪ್ರಸಾದ್ ಆಸ್ಪತ್ರೆಯ ಐದನೇ ಮಹಡಿಯಲ್ಲಿರುವ ಐಸಿಯು ವಿಭಾಗದಲ್ಲಿ ನಡುರಾತ್ರಿ 3:55ರ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ 95 ವರ್ಷದ ರಾಧಾ ದೇವಿ ಎಂಬ ವೃದ್ಧೆ ಆಸ್ಪತ್ರೆ ಸಿಬ್ಬಂದಿಗೆ ಕೂಡಲೇ ಮಾಹಿತಿ ನೀಡಿದ್ದು, ಅನೇಕ ಜೀವಗಳು ಉಳಿಯಲು ಕಾರಣರಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಗೃಹ ಸಚಿವಾಲಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ – ದೀದಿ ವಿರುದ್ಧ ಎಫ್‌ಐಆರ್
ಜಿಲ್ಲಾ ಮ್ಯಾಜಿಸ್ಟ್ರೇಟ್ ನೀಡಿರುವ ಮಾಹಿತಿ ಪ್ರಕಾರ, ಒಟ್ಟು 13 ರಿಂದ 15 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಬೆಂಕಿ ಹೊತ್ತಿಕೊಂಡಿದ್ದು, ಐವರು ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆಯಿದ್ದು, ಪೂರ್ಣ ತನಿಖೆಯ ಬಳಿಕ ಕಾರಣ ತಿಳಿದು ಬರಲಿದೆ ಎಂದು ಹೇಳಿದ್ದಾರೆ.
ನಿನ್ನೆಯಷ್ಟೇ (ಜೂ.3) ದೆಹಲಿಯ ಮಾಳವೀಯ ನಗರದಲ್ಲಿ ಹೋಟೆಲ್‌ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 17 ವಿದೇಶಿಯರು ಸೇರಿದಂತೆ ಒಟ್ಟು 21 ಜನರು ಸಾವನ್ನಪ್ಪಿದ್ದರು.ಇದನ್ನೂ ಓದಿ: ಬಿಜೆಪಿಗೆ ನಾಳೆ ಅಣ್ಣಾಮಲೈ ಗುಡ್‌ಬೈ – ಚೆನ್ನೈನಲ್ಲಿ ಸುದ್ದಿಗೋಷ್ಠಿ ಕರೆದ ʻಸಿಂಗಂʼ













