ಉತ್ತರಪ್ರದೇಶ | ಆಸ್ಪತ್ರೆ ಮುಂಭಾಗದ ಟ್ರಾನ್ಸ್‌ಫಾರ್ಮರ್‌ನಿಂದ ಅಗ್ನಿ ಅವಘಡ – ಹಲವು ವಾಹನಗಳು ಭಸ್ಮ

Public TV
1 Min Read
Fire Breaks Out Near Hospital In Greater Noida

ಲಕ್ನೋ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ (Greater Noid) ಖಾಸಗಿ ಆಸ್ಪತ್ರೆಯೊಂದರ (Hospital) ಮುಂಭಾಗದಲ್ಲಿರುವ ಟ್ರಾನ್ಸ್‌ಫಾರ್ಮರ್‌ನಲ್ಲಿ ಬೆಂಕಿಹೊತ್ತಿಕೊಂಡು (Fire Accident) ಪರಿಣಾಮ, ಕೆಳಗೆ ನಿಲ್ಲಿಸಿದ್ದ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ.

ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಷ್ಟರಲ್ಲೇ ಹಲವಾರು ದ್ವಿಚಕ್ರ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ಗೌತಮ್ ಬುದ್ಧನಗರದ ಸಿಎಫ್‌ಒ ಪ್ರದೀಪ್ ಕುಮಾರ್ ತಿಳಿಸಿದ್ದಾರೆ.

ಅಗ್ನಿ ಅವಘಡದಿಂದಾಗಿ ಆಸ್ಪತ್ರೆಯಲ್ಲಿದ್ದ ರೋಗಿಗಳು ಮತ್ತು ಸಿಬ್ಬಂದಿ ಕೆಲಕಾಲ ಆತಂಕಕ್ಕೊಳಗಾಗಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅದುಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ‌

ಅಗ್ನಿ ಅವಘಡ ಸಂಭವಿಸಿದ ಸ್ಥಳದಿಂದ ಆಸ್ಪತ್ರೆ ಸುಮಾರು 7-8 ಮೀಟರ್‌ ದೂರವಿದ್ದು, ಆಸ್ಪತ್ರೆಗೆ ಯಾವುದೇ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article