ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ 10 ಕಾರುಗಳು, 1 ಮೋಟಾರ್ ಸೈಕಲ್, 2 ಸ್ಕೂಟಿ, 30 ಹೊಸ ಇ-ರಿಕ್ಷಾ, 50 ಹಳೆಯ ಇ-ರಿಕ್ಷಾಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.
ಜಾಮಿಯಾ ನಗರ ಮೆಟ್ರೋ ನಿಲ್ದಾಣ ಬಳಿ ಇರುವ ಎಲೆಕ್ಟ್ರಿಕ್ ಮೋಟಾರ್ ಪಾರ್ಕಿಂಗ್‌ನಲ್ಲಿ ಈ ಘಟನೆ ನಡೆದಿದೆ. ಬುಧವಾರ ಬೆಳಗ್ಗೆ 5 ಗಂಟೆಯ ಸುಮಾರು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದ್ದು, 11 ಅಗ್ನಿ ಶಾಮಕದಳ ವಾಹನಗಳ ಮೂಲಕ ಬೆಂಕಿಯನ್ನು ನಂದಿಸಲಾಗಿದೆ. ಇದನ್ನೂ ಓದಿ: ನಾಳೆಯಿಂದ ಪಿಯುಸಿ ತರಗತಿಗಳು ಪ್ರಾರಂಭ- ಹಿಜಬ್ ನಿಷೇಧ
Advertisement
Advertisement
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲವಾದರೂ ದೊಡ್ಡ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ಹಾನಿಯಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲವೂ ಎಲೆಕ್ಟ್ರಿಕ್ ವಾಹನಗಳಾಗಿರುವ ಹಿನ್ನೆಲೆ ಇದು ಶಾರ್ಟ್ ಸಕ್ಯೂರ್ಟ್ ನಿಂದ ಆಗಿರುವ ಸಾಧ್ಯತೆ ಇದೆ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರೆಪೋ ರೇಟ್ ಏರಿಸಿದ ಆರ್‌ಬಿಐ – ಹೆಚ್ಚಳವಾಗಲಿದೆ ಲೋನ್, ಇಎಂಐಗಳ ಬಡ್ಡಿ ದರ
Advertisement
Advertisement
ದೆಹಲಿಯಲ್ಲಿ ಕಳೆದ ಕೆಲವು ವಾರಗಳಿಂದ ಹಲವು ಕಡೆಗಳಲ್ಲಿ ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಇತ್ತೀಚೆಗೆ ಮುಂಡ್ಕಾದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 27 ಜನರು ಸಾವನ್ನಪ್ಪಿದ್ದರು ಹಾಗೂ ಅನೇಕರು ಗಾಯಗೊಂಡರು. ಮೃತ ದೇಹಗಳ ಗುರುತು ಸಿಗದ ಕಾರಣ ಡಿಎನ್‌ಎ ಪ್ರೊಫೈಲಿಂಗ್ ಮೂಲಕ ಪತ್ತೆ ಮಾಡಲಾಗಿತ್ತು.