Monday, 16th December 2019

Recent News

ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ-6 ಸಾವು

ನವದೆಹಲಿ: ದೇಶದ ರಾಜಧಾನಿ ನವದೆಹಲಿಯ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಆರು ಜನರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ.

ದೆಹಲಿಯ ಜಾಕೀರ್ ನಗರದ ಬಹುಮಹಡಿ ಸೋಮವಾರ ರಾತ್ರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ 5 ವಾಹನಗಳೊಂದಿಗೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಟ್ಟಡದಲ್ಲಿ ಸಿಲುಕಿಕೊಂಡಿದ್ದ ಸುಮಾರು 20 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಗಾಯಗೊಂಡ 11 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *