– ಲಕ್ಷಾಂತರ ರೂ. ನಷ್ಟ
ದಾವಣಗೆರೆ: ಸಿಲಿಂಡರ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ (Gas Leakage) ಬೆಂಕಿ ಕಾಣಿಸಿಕೊಂಡ ಪರಿಣಾಮ ಕಿರಾಣಿ ಅಂಗಡಿ (Grocery Shop) ಸುಟ್ಟು ಕರಕಲಾದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಜಗಳೂರು ತಾಲೂಕಿನ ಹನುಮಂತಾಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.
Advertisement
ಗ್ರಾಮದ ಕುಮಾರ್ ಎನ್ನುವರಿಗೆ ಸೇರಿದ ಕಿರಾಣಿ ಅಂಗಡಿ ಇದಾಗಿದ್ದು, ಅಂಗಡಿಯಲ್ಲಿ ಇರಿಸಿದ್ದ ಸಿಲಿಂಡರ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಹೊರ ಓಡಿಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇದನ್ನೂ ಓದಿ: ಕೋಲಾರ| ಒಂಟಿ ಸಲಗ ದಾಳಿಗೆ ರೈತ ಮಹಿಳೆ ಬಲಿ
Advertisement
Advertisement
ಘಟನೆಯಿಂದ ಅಂಗಡಿಯಲ್ಲಿದ್ದ ಎಲ್ಲಾ ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು, ಅಂಗಡಿ ಮಾಲೀಕ ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅಭಿವೃದ್ಧಿಯಲ್ಲಿ ಭಾರತವನ್ನು ಪಾಕಿಸ್ತಾನ ಸೋಲಿಸದಿದ್ದರೆ ನನ್ನ ಹೆಸರು ಶೆಹಬಾಜ್ ಷರೀಫ್ ಅಲ್ಲ: ಪಾಕ್ ಪ್ರಧಾನಿ ಸವಾಲು
Advertisement