ಕಲಬುರಗಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಆಟೋಮೊಬೈಲ್ ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಕಲಬುರಗಿ ಜಿಲ್ಲೆಯ (kalaburagi) ಅಫಜಲಪುರ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಜವಳಿ ಆಟೋಮೊಬೈಲ್ ಮತ್ತು ಸ್ಟಾರ್ ಕಾರ್ ಗ್ಯಾರೇಜ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಸುಟ್ಟುಹೋಗಿವೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಂಜೂರು ದಫೇದಾರ್ ಮತ್ತು ರಫೀಕ್ ಜವಳಿ ಅವರಿಗೆ ಸೇರಿದ ಎರಡೂ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದ್ದು, ಗ್ಯಾರೇಜ್ನಲ್ಲಿದ್ದ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ.ಇದನ್ನೂ ಓದಿ: RDPR Exam| ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆ
