ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಅಗ್ನಿ ದುರಂತ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಲ್ಲೇಶ್ವರಂ (Malleshwaram) ಹಾಗೂ ಮಾರತಹಳ್ಳಿ ಮುಖ್ಯರಸ್ತೆಯಲ್ಲಿ ತಡರಾತ್ರಿ ಅಗ್ನಿ ದುರಂತ ಸಂಭವಿಸಿದೆ. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸಂಸದರ ಅಮಾನತು – ಯಾವ್ಯಾವ ಅವಧಿಯಲ್ಲಿ ಎಷ್ಟು ಮಂದಿ ಸಸ್ಪೆಂಡ್?
Advertisement
Advertisement
ಮಾರತಹಳ್ಳಿಯ ಮುಖ್ಯರಸ್ತೆಯಲ್ಲಿರುವ ಕಟ್ಟಡವೊಂದರಲ್ಲಿ ತಡರಾತ್ರಿ ಟ್ರಾನ್ಸ್‌ಫಾರ್ಮರ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ (Fire Disaster) ಸಂಭವಿಸಿದೆ. ಈ ವೇಳೆ ಬಿಲ್ಡಿಂಗ್‌ನಲ್ಲಿದ್ದ 4 ಅಂಗಡಿಗಳು ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಸುಟ್ಟು ಕರಕಲಾಗಿವೆ.
Advertisement
ಮಧ್ಯರಾತ್ರಿ ಸತತ 3 ಗಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಅದೃಷ್ಟವಶಾತ್ ಕಟ್ಟಡದಲ್ಲಿ ಮಲಗಿದ್ದ ಮೂವರು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಚ್‌ಎಎಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 28 ಸಾವಿರ ಹಣ ಪಡೆದೂ ಕೆಲಸ ಮಾಡಿಕೊಡದ ಸರ್ವೇಯರ್ – ಮತ್ತೆ ಹಣ ಪಡೆಯುವ ವೇಳೆ ಲೋಕಾ ಬಲೆಗೆ
Advertisement
ಮಲ್ಲೇಶ್ವರಂನಲ್ಲೂ ಅಗ್ನಿ ಅನಾಹುತ: ಇಲ್ಲಿನ ಸಂಪಿಗೆ ರಸ್ತೆಯ ಸಿಗ್ನಲ್ ಬಳಿಯ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಬಟ್ಟೆಗಳು ಸುಟ್ಟುಹೋಗಿವೆ. ಕಂಪ್ಯೂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ (Fire Brigade Employee) ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ.