CrimeDistrictsKalaburagiKarnatakaLatestMain Post

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ

ಕಲಬುರಗಿ: ಚಲಿಸುತ್ತಿದ್ದ ಓಮಿನಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಕಾರು ಸಂಪೂರ್ಣ ಹೊತ್ತಿ ಉರಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಕಲಬುರಗಿ ನಗರದ ಹುಮನಾಬಾದ್ ರಿಂಗ್ ರಸ್ತೆ ಸಮೀಪದ ಕೆಸಿಟಿ ಕಾಲೇಜಿನ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರ ಒಳ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಬಾಗಿಲು ಲಾಕ್ ಆಗಿ ಚಾಲಕ ಹೊರ ಬರಲು ಪರದಾಡಿದ್ದಾನೆ.

ಈ ವೇಳೆ ಸಹಾಯಕ್ಕೆ ಧಾವಿಸಿದ ಸ್ಥಳೀಯರು ಕಾರಿನ ಗ್ಲಾಸ್ ಒಡೆದು ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಚಾಲಕನಿಗೆ ಸಣ್ಣ ಪುಟ್ಟ ಸುಟ್ಟ ಗಾಯಗಳಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಚಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಸ್ಥಳೀಯರು ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ತಡರಾತ್ರಿಯಲ್ಲಿ ಡ್ರಾಪ್ ಕೇಳಿದ ಮಹಿಳೆಗೆ ಪೊಲೀಸರಿಂದ್ಲೇ ಕಿರುಕುಳ!

ಬಳಿಕ ಸ್ಥಳಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published.

Back to top button