ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಲೋವರ್ ಕೊಹಿಸ್ತಾನ್‌ನ ಸೆರಿ ಪ್ರದೇಶದಲ್ಲಿ ಶುಕ್ರವಾರ (ಮಾ.17) ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಮನೆಯಲ್ಲಿ ಮಲಗಿದ್ದ ಅನೇಕರು ಸಜೀವ ದಹನರಾಗಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮತ್ತೆ ಇಂಧನ ಬೆಲೆ ಏರಿಕೆ – 1 ಲೀಟರ್ ಪೆಟ್ರೋಲ್‌ಗೆ 272 ರೂ.
ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ 10 ಮಂದಿ ಮೃತಪಟ್ಟಿದ್ದಾರೆ. ಇತರ ಮೂವರು ಗಾಯಗೊಂಡಿದ್ದಾರೆ. ನಿವಾಸಿಗಳು ಎಚ್ಚರಗೊಳ್ಳುವಷ್ಟರಲ್ಲಿ ಇಡೀ ಮನೆ ಬೆಂಕಿಗೆ ಆಹುತಿಯಾಗಿತ್ತು.
ಮೃತದೇಹಗಳನ್ನು ಹೊರತೆಗೆದು ರವಾನಿಸಲಾಯಿತು. ಗಾಯಗೊಂಡ ಮೂವರನ್ನು ಪಟ್ಟನ್‌ನ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಸಾಗಿಸಲಾಗಿದೆ. ಬೆಂಕಿ ಅವಘಡದಲ್ಲಿ ಹೆಚ್ಚಿನ ಹಾನಿಯಾಗಿದ್ದು, ಎಂಟು ಎಮ್ಮೆಗಳು ಸಹ ಸಾವನ್ನಪ್ಪಿವೆ. ಇದನ್ನೂ ಓದಿ: ಪತನದ ಭೀತಿಯಲ್ಲಿ ಮತ್ತೊಂದು ಬ್ಯಾಂಕ್ – ಕ್ರೆಡಿಟ್ ಸ್ಯೂಸಿ ಸಹಾಯಕ್ಕೆ ನಿಂತ ಸ್ವಿಸ್ ಬ್ಯಾಂಕ್
ಕೆಲವು ದಿನಗಳ ಹಿಂದೆ, ಕರಾಚಿಯ ಷೇರಿಯಾ ಫೈಸಲ್ ರಸ್ತೆಯಲ್ಲಿರುವ ವಾಣಿಜ್ಯ ಮಹಡಿಯಲ್ಲೂ ಬೆಂಕಿ ಅವಘಡ ಸಂಭವಿಸಿತ್ತು. ಇದು ಕೂಡ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿ ಆಗಿತ್ತು ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ ಇಶ್ತಿಯಾಕ್ ಅಹ್ಮದ್ ತಿಳಿಸಿದ್ದರು.