ತೆಲುಗಿನ ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan) ನಟನೆಯ ‘ಹರಿಹರ ವೀರ ಮಲ್ಲು’ (Harihara Veera Mallu) ಸಿನಿಮಾ ಸೆಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದೊಂದು ಐತಿಹಾಸಿಕ ಸಿನಿಮಾವಾಗಿದ್ದರಿಂದ ಭಾರೀ ಪ್ರಮಾಣದ ಸೆಟ್ ಹಾಕಲಾಗಿತ್ತು. ಭಾನುವಾರ ತಡರಾತ್ರಿ ಸೆಟ್ (Set) ನಲ್ಲಿ ಬೆಂಕಿ (Fire) ಕಾಣಿಸಿಕೊಂಡು, 6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸೆಟ್ ಬಹುತೇಕ ಸುಟ್ಟು ಹೋಗಿದೆ.
ಸಂಪೂರ್ಣವಾಗಿ ಸೆಟ್ ಸುಟ್ಟು ಭಸ್ಮವಾಗಿದೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಚಿತ್ರತಂಡ ಹೇಳಿಕೊಂಡಿದೆ. ಬೆಂಕಿ ನಂದಿಸಲು ಹರಸಾಹಸಪಟ್ಟರು ಸಾಧ್ಯವಾಗದೇ ಇರುವಷ್ಟು ಭಾರೀ ಪ್ರಮಾಣದಲ್ಲೇ ಬೆಂಕಿ ಕಾಣಿಸಿಕೊಂಡಿತ್ತು. ಸೆಟ್ ಹಾಗೂ ಶೂಟಿಂಗ್ ಗಾಗಿ ಬಳಸುತ್ತಿದ್ದ ಪರಿಕರಗಳು ಕೂಡ ಬೆಂಕಿಗೆ ಆಹುತಿಯಾಗಿವೆ. ಇದನ್ನೂ ಓದಿ:ರಾಜಕಾರಣ ಬದಿಗಿಟ್ಟು ಪುತ್ರನ ಮದುವೆಗೆ ಮುಖ್ಯಮಂತ್ರಿಯನ್ನು ಆಹ್ವಾನಿಸಿದ ಸುಮಲತಾ
ತೆಲಂಗಾಣದ ದುಂಡಿಗಲ್ ನ ಬೀರಂಪೇಟೆಯಲ್ಲಿ ಅದ್ದೂರಿ ಸೆಟ್ ಹಾಕಲಾಗಿತ್ತು. ಸಿನಿಮಾದ ಬಹುತೇಕ ಶೂಟಿಂಗ್ ಇದೇ ಸೆಟ್ ನಲ್ಲೇ ನಡೆದಿದೆ ಎಂದು ಹೇಳಲಾಗುತ್ತಿದೆ. ಶೇಕಡಾ 75ರಷ್ಟು ಇದೇ ಸೆಟ್ ನಲ್ಲೇ ಚಿತ್ರೀಕರಣವಾಗಿದ್ದು, ಬಾಕಿ ಉಳಿದ ಚಿತ್ರೀಕರಣಕ್ಕಾಗಿ ಮತ್ತೆ ಸೆಟ್ ಹಾಕಬೇಕಾದ ಅನಿವಾರ್ಯತೆ ಎದುರಾಗಿದೆ.
17ನೇ ಶತಮಾನದ ಕಥೆಯನ್ನು ಹೊಂದಿರುವ ಸಿನಿಮಾ ಇದಾಗಿದ್ದು, ಇದೇ ಮೊದಲ ಬಾರಿಗೆ ಪವನ್ ಕಲ್ಯಾಣ್ ಐತಿಹಾಸಿಕ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಬಿ ಡಿಯೋಲ್, ನಿಧಿ ಅಗರ್ವಾಲ್, ನರ್ಗಿಸ್ ಫಕ್ರಿ ಸೇರಿದಂತೆ ಹೆಸರಾಂತ ತಾರಾಬಳಗವೇ ಈ ಸಿನಿಮಾದಲ್ಲಿದೆ. ಕ್ರಿಶ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.