ಬೆಂಗಳೂರು: ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಫ್ಯಾನ್ಸಿ ಸ್ಟೋರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಳಿಗ್ಗೆ 7 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಫ್ಯಾನ್ಸಿ ಸ್ಟೋರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಇದನ್ನೂ ಓದಿ: ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ
ಸ್ಥಳದಲ್ಲಿ ಆರು ಅಗ್ನಿಶಾಮಕದಳ ವಾಹನಗಳು ಆಗಮಿಸಿದ್ದು, ದಟ್ಟ ಹೊಗೆ ಆವರಿಸಿಕೊಂಡ ಹಿನ್ನೆಲೆ ಆಕ್ಸಿಜನ್ ಸಿಲಿಂಡರ್, ಮಾಸ್ಕ್ ಧರಿಸಿ ಅಗ್ನಿಶಾಮಕ ಸಿಬ್ಬಂದಿ ಅಂಗಡಿ ಒಳಗೆ ಹೋಗಿ, ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಕಳೆದ ಒಂದು ಗಂಟೆಯಿಂದ ಕಾರ್ಯಾಚರಣೆ ನಡೆಯುತ್ತಿದೆ.

