ಭತ್ತದ ಮೇವು ತುಂಬಿದ್ದ ಟ್ರ್ಯಾಕ್ಟರ್​​ಗೆ ಬೆಂಕಿ

Advertisements

ಯಾದಗಿರಿ: ಭತ್ತದ ಮೇವು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್​​ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ, ನಡು ರಸ್ತೆಯಲ್ಲಿ ಟ್ರ‍್ಯಾಕ್ಟರ್ ಧಗ ಧಗನೇ ಹೊತ್ತಿ ಉರಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

Advertisements

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಪ್ರಮುಖ ವಾಲ್ಮೀಕಿ ಸರ್ಕಲ್ ನಲ್ಲಿ ಈ ಅವಘಡ ನಡೆದಿದೆ. ರಸ್ತೆ ಬದಿಯಲ್ಲಿ ಬೆಳೆದಿದ್ದ ಗಿಡ, ಮುಳ್ಳು, ಕಸಕ್ಕೆ ಬೆಂಕಿ ಹಚ್ಚಲಾಗಿತ್ತು. ಟ್ರಾಕ್ಟರ್ ತುಂಬೆಲ್ಲ ಭತ್ತದ ಹುಲ್ಲು ಇದ್ದ ಕಾರಣ ರಸ್ತೆಯಲ್ಲಿ ಟ್ರಾಕ್ಟರ್ ಚಲಿಸುವಾಗ ಬೆಂಕಿ ಹತ್ತಿರಬಹುದೆಂದು ಶಂಕಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

Advertisements

ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಬೆಂಕಿ ನಂದಿಸಲು ಸ್ಥಳೀಯ ಕೆಲ ಹೊತ್ತು ಹರಸಾಹಸ ಪಡಬೇಕಾಯಿತು. ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

Advertisements
Exit mobile version