ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಆಕಸ್ಮಿಕ ಬೆಂಕಿಗೆ ತಗುಲಿ ಎಂಎಸ್‍ಐಎಲ್ ಮದ್ಯದಂಗಡಿ ಹೊತ್ತಿ ಉರಿದಿದೆ.
ದೇವದುರ್ಗ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಬಳಿಯಿರುವ ಮದ್ಯದಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, 16 ಲಕ್ಷ ರೂ.ಮೌಲ್ಯದ ಮದ್ಯ ಹಾಗೂ ಇತರೆ ವಸ್ತುಗಳು ಭಸ್ಮವಾಗಿವೆ. ಬೆಂಕಿ ಅವಘಡಕ್ಕೆ ವಿದ್ಯುತ್ ಶಾಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮದ್ಯದಂಗಡಿಯಲ್ಲಿದ್ದ ವಿವಿಧ ಬ್ರ್ಯಾಂಡ್ ಗಳ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಬೆಂಕಿಗಾಹುತಿಯಾಗಿದೆ.
ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.