ಕಾರವಾರ: ನಗರದ ಕದಂಬ ನೌಕಾನೆಲೆಯಿಂದ ಅರಬ್ಬಿ ಸಮುದ್ರದ ಮಾರ್ಗವಾಗಿ ಮುಂಬೈ ಕಡೆ ತೆರಳುತ್ತಿದ್ದ INS ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯುದ್ಧ ನೌಕೆಯಲ್ಲಿರುವ ಅಗ್ನಿನಿರೋಧಕ ವಸ್ತುಗಳನ್ನು ಬಳಸಿ ಬೆಂಕಿ ನಂದಿಸಲಾಗಿದೆ.
ಕ್ಯಾಪ್ಟನ್ ಸುಶೀಲ್ ಮೆನನ್ ವಿಕ್ರಮಾದಿತ್ಯದ ಕಮಾಂಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಕೆಲವು ತಿಂಗಳಿಂದ ಕಾರವಾರದ ಕದಂಬ ನೌಕಾನೆಲೆಯಲ್ಲಿ ಹಡಗಿನ ದುರಸ್ತಿ ಕಾರ್ಯ ಸಹ ನಡೆಸಲಾಗಿತ್ತು. ಆದರೆ ಬುಧವಾರ ಕಾರವಾರದ ಕದಂಬ ನೌಕಾ ನೆಲೆಯಿಂದ ಮುಂಬೈಗೆ ಹೋಗುವ ಮಾರ್ಗದ ಆಳ ಸಮುದ್ರದಲ್ಲಿ ಹಡಗಿಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಬೆಂಬಲ, ವ್ಯಕ್ತಿ ಮೇಲೆ ಹಲ್ಲೆ- ಇಬ್ಬರ ಬಂಧನ
Advertisement
#Flash
During a planned sortie for conduct of sea trials off Karwar, an incident of fire was reported onboard INS
Vikramaditya today 20 Jul 22. The fire was brought under control by the ship’s crew using onboard systems. No casualties have been reported (1/2)
— SpokespersonNavy (@indiannavy) July 20, 2022
ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಅದೃಷ್ಟವಶಾತ್ ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದು, ಬೆಂಕಿ ನಂದಿಸಲಾಗಿದೆ. ಈ ಹಿಂದೆ ಸಹ ಕಾರವಾರದ ನೌಕಾನೆಲೆಯಲ್ಲಿದ್ದ ಈ ಹಡಗಿನಲ್ಲಿ ಸಿಲೆಂಡರ್ ಸ್ಫೋಟಗೊಂಡು ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದರು. ಇದಾದ ಮೂರು ವರ್ಷದ ಬಳಿಕ ಇದೀಗ ಮತ್ತೆ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್- ಇಂದು ಇಡಿ ಮುಂದೆ ಹಾಜರಾಗಲಿದ್ದಾರೆ ಸೋನಿಯಾ