ಕಾರವಾರ: ಆಕಸ್ಮಿಕ ಬೆಂಕಿ ತಗುಲಿ ನಡು ರಸ್ತೆಯಲ್ಲಿಯೇ ಮ್ಯಾಂಗನೀಸ್ ಲಾರಿಯೊಂದು ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪದ ರಾಷ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಹೊಸಪೇಟೆಯಿಂದ ಗೋವಾಕ್ಕೆ ಮ್ಯಾಂಗನೀಸ್ ಹೊತ್ತು ತೆರಳುತ್ತಿದ್ದ ಲಾರಿ ಇದಾಗಿದ್ದು, ಆಕಸ್ಮಿಕ ಬೆಂಕಿಯಿಂದ ಅರಬೈಲ್ ಘಾಟ್‍ನಲ್ಲಿ ಹೊತ್ತಿ ಉರಿದಿದೆ. ಘಟನೆಯಲ್ಲಿ ಲಾರಿ ಸೇರಿದಂತೆ ಮ್ಯಾಂಗನೀಸ್ ಕೂಡ ಕರಗಿ ಹೊಗಿದ್ದು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಘಟನೆಯ ಹಿನ್ನೆಲೆ ಕೆಲ ಸಮಯ ಸಂಚಾರ ಅಸ್ತವ್ಯಸ್ತವಾಗಿತ್ತು. ಇದನ್ನೂ ಓದಿ: ಟೋಲ್ ಪ್ಲಾಜಾ ನೌಕರರ ಮೇಲೆ ಬಿಜೆಪಿ ಮುಖಂಡನ ಗೂಂಡಾ ವರ್ತನೆ
ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನೆಡೆದಿದೆ. ಇದನ್ನೂ ಓದಿ: ಸಂಬಂಧದ ವಿಚಾರ ಗೊತ್ತಾಗಿ ನೋವಿನಿಂದ ಗಲಾಟೆ ಮಾಡಿದ್ದು ನಿಜ, ಆದ್ರೆ ಕೊಲೆ ಮಾಡಿಲ್ಲ: ಅನಂತರಾಜು ಪತ್ನಿ