ಬೀದರ್: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಿರಾಣಿ ಅಂಗಡಿಗೆ ಬೆಂಕಿ ತಗುಲಿ ಬರೋಬ್ಬರಿ 11 ಲಕ್ಷ ರೂ. ಮೌಲ್ಯದ ವಸ್ತುಗಳ ಬೆಂಕಿಗಾಹುತಿಯಾಗಿರುವ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ (Basava Kalyana) ತಾಲೂಕಿನ ಸಸ್ತಾಪೂರ್ ಬಂಗ್ಲಾ ಬಳಿ ನಡೆದಿದೆ.
ಮಹೇಶ್ ರೆಡ್ಡಿ ಎಂಬುವವರಿಗೆ ಸೇರಿದ ಕಿರಾಣಿ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.ಇದನ್ನೂ ಓದಿ: ಸುರ್ಜೇವಾಲ ಮಹತ್ವದ ಸಭೆಗೆ ಪರಂ, ರಾಜಣ್ಣ ಗೈರು!
ರಾತ್ರಿ ಅಂಗಡಿ ಮುಚ್ಚಿ ಮನೆಗೆ ಹೋಗಿದ್ದರು. ಈ ವೇಳೆ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದ್ದು, ಕಿರಾಣಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಷ್ಟರಲ್ಲಿ ಅಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಕುರಿತು ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಸಾಬ್ರುಗೂ ಎರಡು ಮಕ್ಕಳು ಮಾಡಿಕೊಳ್ಳಿ ಅಂತ ಸಿಎಂ ಹೇಳಲಿ – ಅಶೋಕ್ ಕಿಡಿ