ತಿರುಪತಿ: ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ (Tirupati Temple) ಲಡ್ಡು ಕೌಂಟರ್‌ನಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದೆ.
ದೇವಾಲಯದ 47ನೇ ಲಡ್ಡು ಕೌಂಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ದೇವಾಲಯದ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದ ಭಾರೀ ಅನಾಹುತ ತಪ್ಪಿದೆ.
ದೇವಾಲಯದ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಇತರ ಭಾಗಗಳಿಗೆ ಬೆಂಕಿ ಹರಡುವುದು ತಪ್ಪಿದಂತಾಗಿದೆ.
ಜ. 8ರಂದು ತಿರುಪತಿಯಲ್ಲಿ ಸಾವಿರಾರು ಭಕ್ತರು ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್‌ಗಾಗಿ ಮುಗಿಬಿದ್ದಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು. ಇದರಿಂದ ಸುಮಾರು 6 ಜನ ಸಾವನ್ನಪ್ಪಿದ್ದರು. ತಿರುಪತಿಯ ವಿಷ್ಣು ನಿವಾಸದ ಬಳಿ ಇರುವ ತಿರುಮಲ ಶ್ರೀವಾರಿ ವೈಕುಂಠ ದ್ವಾರದಲ್ಲಿ ಬುಧವಾರ ರಾತ್ರಿ ಈ ಅವಘಡ ಸಂಭವಿಸಿತ್ತು. ಇದಾದ ಕೆಲವೇ ದಿನಗಳ ಅಂತರದಲ್ಲಿ ಅಗ್ನಿಅವಘಡ ಸಂಭವಿಸಿದೆ.