ನವದೆಹಲಿ: ಹಬ್ಬ ಹರಿದಿನಗಳಲ್ಲಿ ಮಾಲಿನ್ಯವನ್ನು ತಡೆಗಟ್ಟಲು ಎಲ್ಲಾ ರೀತಿಯ ಪಟಾಕಿ ( Fire Crackers) ಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯ ಮೇಲಿನ ನಿಷೇಧವನ್ನು ಜನವರಿ 1 ರವರೆಗೆ ವಿಸ್ತರಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ (Gopal Rai) ಬುಧವಾರ ಘೋಷಿಸಿದ್ದಾರೆ.
दिल्ली में लोगों को प्रदूषण के खतरे से बचाने के लिए पिछले साल की तरह ही इस बार भी सभी तरह के पटाखों के उत्पादन, भंडारण, बिक्री और उपयोग पर पूरी तरह प्रतिबंध लगाया जा रहा है, तांकि लोगों की जिंदगी बचाई जा सके।
— Gopal Rai (@AapKaGopalRai) September 7, 2022
Advertisement
ಆನ್‍ಲೈನ್ (Online) ನಲ್ಲಿ ಪಟಾಕಿ ಮಾರಾಟಕ್ಕೂ ನಿಷೇಧವನ್ನು ವಿಸ್ತರಿಸಲಾಗಿದೆ ಎಂದು ರೈ ಟ್ವಿಟ್ ಮಾಡಿದ್ದಾರೆ. ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದರಿಂದ ಜನರ ಜೀವನವನ್ನು ಉಳಿಸಬಹುದು ಎಂದು ಗೋಪಾಲ್ ರೈ ತಿಳಿಸಿದ್ದಾರೆ.
Advertisement
Advertisement
ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸ್, ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆಯೊಂದಿಗೆ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಬಿಎಸ್‌ವೈ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ – ಮರು ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶ
Advertisement
इस बार दिल्ली में पटाखों की ऑनलाइन बिक्री / डिलीवरी पर भी प्रतिबंध रहेगा। यह प्रतिबंध 1 जनवरी 2023 तक लागू रहेगा।
प्रतिबंध को कड़ाई से लागू करने को लेकर दिल्ली पुलिस, DPCC और राजस्व विभाग के साथ मिलकर कार्य योजना बनाई जाएगी।
— Gopal Rai (@AapKaGopalRai) September 7, 2022
ಕಳೆದ ವರ್ಷ ಕೊರೊನಾ ವೈರಸ್ (Corona Virus) ಮತ್ತು ಹದಗೆಡುತ್ತಿರುವ ಗಾಳಿಯ ಗುಣಮಟ್ಟದಿಂದಾಗಿ ಹಬ್ಬದ ಸೀಸನ್‍ಗೂ ಮುಂಚಿತವಾಗಿ ರಾಷ್ಟ್ರ ರಾಜಧಾನಿಯಲ್ಲಿ “ಗ್ರೀನ್ ಕ್ರ್ಯಾಕರ್ಸ್” ಸೇರಿದಂತೆ ಪಟಾಕಿಗಳನ್ನು ಮಾರಾಟ ಮಾಡುವುದನ್ನು ಮತ್ತು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ದೆಹಲಿ ಸರ್ಕಾರ ಆದೇಶಿಸಿತ್ತು. ಪಟಾಕಿ ಸಿಡಿಸುವುದರ ವಿರುದ್ಧ ಜಾಗೃತಿ ಮೂಡಿಸಲು ಎಎಪಿ ‘ಪತಾಖೆ ನಹಿ ದಿಯೆ ಜಲಾವೋ’ ಅಭಿಯಾನವನ್ನೂ ಆರಂಭಿಸಿತ್ತು.