ಚಾಮರಾಜನಗರ: ತಮಿಳುನಾಡು (Tamil Nadu) ಬೇಟೆಗಾರರು (Hunters) ಹಾಗೂ ಕರ್ನಾಟಕ (Karnataka) ಅರಣ್ಯ ಸಿಬ್ಬಂದಿ (Forest Officers) ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಬೇಟೆಗಾರನೊಬ್ಬ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಚಾಮರಾಜನಗರ (Chamarajanagar) ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿಭಾಗವಾದ ಕಾವೇರಿ ವನ್ಯಜೀವಿ ವಿಭಾಗದ ಪಾಲಾರ್ ಅರಣ್ಯ ವಲಯದಲ್ಲಿ ತಮಿಳುನಾಡಿನ ಬೇಟೆಗಾರರು ಹಾಗೂ ಕರ್ನಾಟಕ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಬೇಟೆಗಾರರು ಅಕ್ರಮವಾಗಿ ಅರಣ್ಯ ಪ್ರವೇಶಿಸಿ, ವನ್ಯ ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಕಂಡು ಬೇಟೆಗಾರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಅರಣ್ಯ ಸಿಬ್ಬಂದಿಯೂ ಪ್ರತಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಎಣ್ಣೆ ಬೇಗ ಕೊಡದಿದ್ದಕ್ಕೆ ಬಾರ್ ಹುಡುಗನ ಮೇಲೆ ಹಲ್ಲೆ- 23 ದಿನಗಳ ಬಳಿಕ ಸಾವು
Advertisement
Advertisement
ಘಟನೆಯಲ್ಲಿ ಓರ್ವ ಬೇಟೆಗಾರ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಾವೇರಿ ನದಿಯಲ್ಲಿ ತಮಿಳುನಾಡು ಮೂಲದ ರಾಜು ಎಂಬವರ ಶವ ಪತ್ತೆಯಾಗಿದೆ. ಆ ವ್ಯಕ್ತಿಯ ವೈಯಕ್ತಿಕ ಮಾಹಿತಿ ಲಭ್ಯವಾಗಿಲ್ಲ. ಘಟನೆ ಬಗ್ಗೆ ಅರಣ್ಯಾಧಿಕಾರಿಗಳಿಂದ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
Advertisement
ಅದೃಷ್ಟವಶಾತ್ ಗುಂಡಿನ ದಾಳಿ ವೇಳೆ ಅರಣ್ಯ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಈ ಬಗ್ಗೆ ಮಹದೇಶ್ವರ ಬೆಟ್ಟದ ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಇಬ್ಬರ ಮೃತ ದೇಹ ಪತ್ತೆ – ಗೋ ರಕ್ಷಕರ ವಿರುದ್ಧ ಪ್ರಕರಣ ದಾಖಲು
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k