ಹಾಸನ: ಕಾವೇರಿ ನದಿಯಲ್ಲಿ ಮುಳುಗಿ ಪ್ರಾಣ ಕಳೆದುಕೊಳ್ಳುವುದರಲ್ಲಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಸೇತುವೆ ಬಳಿ ನಡೆದಿದೆ.
ಮೈಸೂರಿ ಮೂಲದ ಚಲುವಮ್ಮ(36) ಪ್ರಾಣ ಕಳೆದುಕೊಳ್ಳಲು ಹೋಗಿದ್ದ ಮಹಿಳೆ. ಚಲುವಮ್ಮ ಕಾವೇರಿ ನದಿ ನೀರಿಗೆ ಬಿದ್ದು ಒದ್ದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅರಕಲಗೂಡು ಅಗ್ನಿಶಾಮಕ ಸಿಬ್ಬಂದಿ ಚಲುವಮ್ಮನನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಫೋನಿನಲ್ಲಿ ಮಾತಾಡ್ಕೊಂಡು ಒನ್ ವೇನಲ್ಲಿ ಬಂದು ಮತ್ತೊಬ್ಬನ ಕೈ ಕಟ್ ಮಾಡಿದ!
ಚಲುವಮ್ಮ ಕಾಲುಜಾರಿ ನೀರಿಗೆ ಬಿದ್ದರೋ ಅಥವಾ ಆತ್ಮಹತ್ಯೆಗೆ ಯತ್ನಿಸಿ ನೀರಿಗೆ ಬಿದ್ದರೋ ಎಂಬುದು ಇನ್ನೂ ತಿಳಿದುಬಂದಿಲ್ಲ. ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಬಾಳೆಎಲೆಯಲ್ಲಿ ಮೂಡಿದ ಮೋದಿ ಚಿತ್ರ