Connect with us

Latest

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಏಳು ಮಂದಿ ದುರ್ಮರಣ

Published

on

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.

ಚೆನ್ನೈನಿಂದ 190 ಕಿ.ಮೀ ದೂರದಲ್ಲಿರುವ ಕಡಲೂರು ಜಿಲ್ಲೆಯ ಕುರುಂಗುಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣೆ ಕಾರ್ಯದಲ್ಲಿ ನಿರತರಾಗಿದ್ದಾರೆ.

ಸದ್ಯಕ್ಕೆ ಪೊಲೀಸರು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದಕ್ಕೆ ಕಾರಣವನ್ನು ಪತ್ತೆ ಹಚ್ಚುತ್ತಿದ್ದಾರೆ. ಈ ಸ್ಫೋಟದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಡಲೂರು ಪೊಲೀಸ್ ವರಿಷ್ಠಾಧಿಕಾರಿ ಎಂ.ಅಭಿನವ್ ಹೇಳಿದ್ದಾರೆ.

ಪಟಾಕಿ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದಿಯಾ ಅಥವಾ ಸ್ಫೋಟವೇ ಎಂಬುದು ಇನ್ನೂ ತಿಳಿದು ಬಂದಿಲ್ಲ. ಸದ್ಯಕ್ಕೆ ಈ ಕುರಿತು ತನಿಖೆ ನಡೆಸುತ್ತಿದ್ದೇವೆ. ಶಾರ್ಟ್ ಸರ್ಕ್ಯೂಟ್‌ನಿಂದಲೂ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Click to comment

Leave a Reply

Your email address will not be published. Required fields are marked *