– ಮೃತರ ಕುಟುಂಬಗಳಿಗೆ ಬಿಜೆಪಿಯಿಂದ ತಲಾ ಒಂದು ಲಕ್ಷ ರೂ. ಪರಿಹಾರ
ಹಾವೇರಿ: ಹಾವೇರಿ (Haveri) ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಃಖದ ಸಂಗತಿಯಾಗಿದೆ. ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಈ ರೀತಿಯ ಅಪಾಯಕಾರಿ ಸ್ಥಳಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಹಾವೇರಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಈ ರೀತಿಯ ಪಟಾಕಿ (Fire Works) ಸಿಡಿಮದ್ದು ದಾಸ್ತಾನು ಕೇಂದ್ರಗಳ ಕುರಿತು ಪರಿಶೀಲನೆ ನಡೆಸಿ ಕಾರ್ಮಿಕರಿಗೆ ಸೂಕ್ತ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಇಂದೇ ಗೃಹಲಕ್ಷ್ಮಿ ಹಣ ಬರುವ ನಿರೀಕ್ಷೆಯಲ್ಲಿ ರಾಯಚೂರಿನ 3,64,059 ಫಲಾನುಭವಿಗಳು
ಬೆಂಕಿ ಅವಘಡದಲ್ಲಿ ಸಜೀವ ದಹನವಾಗಿರುವ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣ ಸೂಕ್ತ ಪರಿಹಾರ ನೀಡಬೇಕು. ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಗೃಹಲಕ್ಷ್ಮಿ ಚಾಲನೆಗೆ ಮೈಸೂರನ್ನೇ ಆಯ್ಕೆ ಮಾಡಿದ್ದು ಯಾಕೆ – ಇಲ್ಲಿದೆ ಇನ್‌ಸೈಡ್ ಸ್ಟೋರಿ
ಬಿಜೆಪಿಯಿಂದ ತಲಾ ಒಂದು ಲಕ್ಷ ರೂ. ಪರಿಹಾರ:
ಬೆಂಕಿ ದುರ್ಘಟನೆಯಲ್ಲಿ ಮೃತರ ಕುಟುಂಬಗಳಿಗೆ ರಾಜ್ಯ ಬಿಜೆಪಿ (BJP) ವತಿಯಿಂದ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಸಿಲಿಂಡರ್ ಬೆಲೆ 200 ರೂ. ಇಳಿಸಿದ್ದಾರೆ: ಡಿಕೆಶಿ
Web Stories