ಮಡಿಕೇರಿ: ಕೊಡಗಿನ (Kodagu) ವಿಶ್ವ ಹಿಂದೂ ಪರಿಷತ್ (Vishva Hindu Parishad) ಅಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿಯವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಲು (Firing) ಯತ್ನಿಸಿದ ಘಟನೆ ಬುಧವಾರ ರಾತ್ರಿ ಅಬ್ಯಾಲದಲ್ಲಿ ನಡೆದಿದೆ.
ಕೃಷ್ಣಮೂರ್ತಿಯವರು ಚೆಟ್ಟಳ್ಳಿಯಿಂದ (Chettalli) ಮಡಿಕೇರಿಗೆ ಬರುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಗುಂಡು ಕಾರಿಗೆ ತಗುಲಿದೆ. ಇದರಿಂದ ವಿಹೆಚ್‍ಪಿ (VHP) ಅಧ್ಯಕ್ಷ ಬಚಾವ್ ಆಗಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ನಂತರ ಯಾದಗಿರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಗೆ ಟಿಕೆಟ್
ಈ ಸಂಬಂಧ ಮಡಿಕೇರಿ (Madikeri) ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಎಂತಹ ನಾಯಕರಾದರೂ ಸಿದ್ದರಾಮಯ್ಯ ನನ್ನಂತೆ ಒಬ್ಬ ಅಭ್ಯರ್ಥಿ: ಸೋಮಣ್ಣ