ಬೆಂಗಳೂರು: ಚಾರ್ಜ್ ಶೀಟ್ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಎಫ್‌ಐಆರ್ ದಾಖಲಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಇನ್ಸ್ ಪೆಕ್ಟರ್ ಜಯರಾಜ್ ಹಾಗೂ ಎಎಸ್‌ಐ ಶಿವಕುಮಾರ್ ಆರೋಪಿಗಳು. ಜಯರಾಜ್ ಈ ಹಿಂದೆ ಕೆಆರ್ ಪುರಂ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು. ಸದ್ಯ ಸಿಐಡಿಯಲ್ಲಿ ಇನ್ಸ್ ಪೆಕ್ಟರ್ ಜಯರಾಜ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Advertisement
Advertisement
ಕೌಟುಂಬಿಕ ಕಲಹದಲ್ಲಿ ಪತಿ ವಿರುದ್ಧ ಪತ್ನಿ ದೂರು ದಾಖಲಿಸಿದ್ದರು. ಪತ್ನಿಯ ದೂರಿನನ್ವಯ ಗಂಡ ಸಂಜು ರಾಜನ್‌ನನ್ನು ಕೆಆರ್ ಪುರಂ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಬಳಿಕ ಜಾಮೀನು ಪಡೆದು ಸಂಜು ರಾಜನ್ ಜೈಲಿನಿಂದ ಬಿಡುಗಡೆಯಾಗಿದ್ದರು.
Advertisement
ಈ ಹಿನ್ನೆಲೆಯಲ್ಲಿ ಪ್ರತಿವಾರ ಠಾಣೆಗೆ ಆಗಮಿಸಿ ಸಹಿ ಮಾಡಲು 500 ರಿಂದ 10 ಸಾವಿರದವರಗೆ ಪೊಲೀಸರು ಲಂಚ ಪಡೆಯುತ್ತಿದ್ದರು. ಬೇಗ ಚಾರ್ಜ್ ಶೀಟ್ ಮಾಡಲು 80 ಸಾವಿರ ರೂ. ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಾಜಪೇಯಿ ಜನ್ಮ ದಿನಾಚರಣೆ ಆಚರಿಸಿದ ರಮೇಶ್ ಜಾರಕಿಹೊಳಿ
Advertisement
ಸಕ್ಷಮ ಪ್ರಾಧಿಕಾರದ ಅನುಮತಿ ಮೇರೆಗೆ ಇನ್ಸ್ಪೆಕ್ಟರ್ ಜಯರಾಜ್ ಹಾಗೂ ಎಎಸ್‌ಐ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿ ಎಸಿಬಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಶ್ರೀಮಂತ ಬೇಡ, ಕಷ್ಟದಲ್ಲಿರುವವನ ಜೊತೆ ಡೇಟಿಂಗ್ ಮಾಡಲು ಇಷ್ಟ: ಹರ್ನಾಜ್ ಸಂಧು