ಬೆಂಗಳೂರು: ಮೊದಲ ವಾರ್ಷಿಕೋತ್ಸವ ಆಚರಿಸಲು ಕೆಲವೇ ದಿನಗಳಿರುವ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅಭಿಮಾನಿಗಳಿಗೆ ಪ್ರತಿದಿನ ಗುಡ್ ನ್ಯೂಸ್ ಕೊಡಲು ಆರಂಭಿಸಿದ್ದಾರೆ.
ಗುಡ್‍ನ್ಯೂಸ್ ಎಂದರೆ ಹೊಸ ಸಿನಿಮಾದಲ್ಲಿ ಅಭಿನಯಿಸುವ ಬಗ್ಗೆ ಯಾವುದೇ ಮಾಹಿತಿ ತಿಳಿಸುತ್ತಿಲ್ಲ. ಬದಲಾಗಿ ಮದುವೆಯ ತಯಾರಿ, ಮದುವೆಯ ಎಕ್ಸ್ ಕ್ಲೂಸಿವ್ ಫೋಟೋ ಮತ್ತು ಸಣ್ಣ ವಿಡಿಯೋಗಳನ್ನು ಫೇಸ್‍ಬುಕ್ ನಲ್ಲಿ ಶೇರ್ ಮಾಡುವುದಾಗಿ ರಾಧಿಕಾ ಪಂಡಿತ್ ತಿಳಿಸಿದ್ದಾರೆ.
Advertisement
ರಾಧಿಕಾ ಪಂಡಿತ್ ಮೊದಲ ವಾರ್ಷಿಕೋತ್ಸವಕ್ಕೆ 10 ದಿನ ಇದೆ. ಹೀಗಾಗಿ ಪ್ರತಿದಿನ ಫೋಟೋವನ್ನು ಶೇರ್ ಮಾಡುತ್ತೇನೆ ಎಂದು ಬುಧವಾರ ಹೇಳಿದ್ದರು. ಅದರಂತೆ ಗುರುವಾರ ಸೆಟ್ ನಿರ್ಮಾಣ ಮತ್ತು ಆಹ್ವಾನ ಪತ್ರಿಕೆ ವಿನ್ಯಾಸಕ್ಕೆ ಸಂಬಂಧಿಸಿದ ಫೋಟೋ ಅಪ್ಲೋಡ್ ಮಾಡಿದ್ದಾರೆ.
Advertisement
ಕಳೆದ ಡಿಸೆಂಬರ್ ಡಿಸೆಂಬರ್ 9 ರಂದು ಯಶ್ ಹಾಗೂ ರಾಧಿಕಾ ಪಂಡಿತ್ ಹಸೆಮಣೆ ಏರಿದ್ದರು. ಇಬ್ಬರ ವಿವಾಹ ಸಮಾರಂಭಕ್ಕಾಗಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಐತಿಹಾಸಿಕ ಸೋಮನಾಥೇಶ್ವರ ದೇವಸ್ಥಾನದ ಸೆಟ್ ನಿರ್ಮಾಣವಾಗಿತ್ತು. ಒಂದು ಸಾವಿರಕ್ಕೂ ಹೆಚ್ಚು ತಾವರೆ ಹೂ, ಸೇವಂತಿ ಹೂ, ನಂದಿ ಬಟ್ಟಲು ಹೂ, ಮೈಸೂರು ಮಲ್ಲಿಗೆ ಹೂ, ಸುಗಂಧ ರಾಜ ಹೂಗಳಿಂದ ಅಲಂಕಾರಗೊಂಡಿದ್ದ ಮದುವೆ ಮಂಟಪದಲ್ಲಿ ರಾಧಿಕಾ ಪಂಡಿತ್ ರವರಿಗೆ ಯಶ್ ತಾಳಿ ಕಟ್ಟಿದ್ದರು. ಅರಮನೆ ಮೈದಾನದಲ್ಲಿ ಯಶ್-ರಾಧಿಕಾ ಪಂಡಿತ್ ರವರ ಅದ್ಧೂರಿ ಆರತಕ್ಷತೆ ನಡೆದಿತ್ತು.
Advertisement
Advertisement
https://youtu.be/0YdkvpPeMAs