ಟೋಂಗಾ: ಕೊರೊನಾ ವೈರಸ್‍ನಿಂದ ದೂರ ಉಳಿದಿದ್ದ ವಿಶ್ವದ ಕೆಲವೇ ಕೆಲವು ರಾಷ್ಟ್ರಗಳಲ್ಲಿ ಒಂದಾಗಿದ್ದ ಟೋಂಗಾ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸೋಂಕು ಪತ್ತೆಯಾಗಿದೆ.
Advertisement
ನ್ಯೂಜಿಲೆಂಡ್‍ನಿಂದ ಬಂದ ಪ್ರಯಾಣಿಕರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಪೂರ್ಣ ಪ್ರಮಾಣದ ಲಸಿಕೆ ಪಡೆದ 215 ಮಂದಿ ನ್ಯೂಜಿಲೆಂಡ್‍ನಿಂದ ಟೋಂಗಾಕ್ಕೆ ಬಂದಿಳಿದಿದ್ದಾರೆ. ಈ ಪೈಕಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಇದರ ಬೆನ್ನಲ್ಲೇ ದೇಶದಲ್ಲಿ ಲಾಕ್‍ಡೌನ್ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಗೌಪ್ಯವಾಗಿ ಬೂಸ್ಟರ್ ಡೋಸ್ ಪಡೆಯುತ್ತಿರುವ ಆರೋಗ್ಯ ಸಿಬ್ಬಂದಿ
Advertisement
Advertisement
ನ್ಯೂಜಿಲೆಂಡ್‍ನಿಂದ ಟೋಂಗಾಕ್ಕೆ ಬಂದಿಳಿದ ಎಲ್ಲಾ ಪ್ರಯಾಣಿಕರನ್ನು ಕ್ವಾರಂಟೈನ್‍ಗೆ ಒಳಗಾಗುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಪ್ರಧಾನಿ ಪೊಹಿವಾ ಅವರು ಭವಿಷ್ಯದಲ್ಲಿ ಟೋಂಗಾ ದೇಶದಲ್ಲಿ ಲಾಕ್‍ಡೌನ್ ಜಾರಿಮಾಡಬೇಕಾಗಬಹುದು ಎಂದು ಎಚ್ಚರಿಸಿದ್ದಾರೆ. ಕೇವಲ 1.06ಲಕ್ಷ ಜನಸಂಖ್ಯೆ ಇರುವ ಪುಟ್ಟ ರಾಷ್ಟ್ರದಲ್ಲಿ ಈವರೆಗೆ ಮೂರನೇ ಒಂದರಷ್ಟು ಜನರು ಮಾತ್ರ ಕೋವಿಡ್ ಲಸಿಕೆ ಪಡೆದಿದ್ದಾರೆ. ಇದನ್ನೂ ಓದಿ: 5-6 ದಿನ ಪುನೀತ್ ಸಮಾಧಿ ಬಳಿ ಯಾರನ್ನೂ ಬಿಡಲ್ಲ: ಅರಗ ಜ್ಞಾನೇಂದ್ರ
Advertisement