ನವದೆಹಲಿ: ಕೇಂದ್ರ ಸರ್ಕಾರ ಇಂದಿನಿಂದ ದೇಶದಲ್ಲಿ ನೂತನ ಕಾನೂನನ್ನು ಜಾರಿ ಮಾಡಿದ್ದು, ಭಾರತೀಯ ನ್ಯಾಯ ಸಂಹಿತೆ 2023ರ (Bharatiya Nyaya Sanhita) ಅಡಿ ಮೊದಲ ಎಫ್‌ಐಆರ್ (FIR) ದಾಖಲಾಗಿದೆ.
ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ (BNS) ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ನಿಯಮ ಬಾಹಿರವಾಗಿ ದೆಹಲಿ ರೈಲ್ವೇ ಮೇಲ್ಸೇತುವೆಯಲ್ಲಿ ವ್ಯಾಪಾರ ನಡೆಸಿದ್ದಕ್ಕಾಗಿ ಬೀದಿಬದಿ ವ್ಯಾಪಾರಿಯೊಬ್ಬನ ಮೇಲೆ ಬಿಎನ್‌ಎಸ್ ಸೆಕ್ಷನ್ 285ರ ಅಡಿ ಪ್ರಕರಣ ದಾಖಲಿಸಲಾಗಿದೆ. ಇನ್ನುಮುಂದೆ ಎಲ್ಲಾ ಎಫ್‌ಐಆರ್‌ಗಳನ್ನು ಬಿಎನ್‌ಎಸ್ ಅಡಿಯಲ್ಲಿ ದಾಖಲಿಸಲಾಗುತ್ತದೆ. ಇದನ್ನೂ ಓದಿ: ಬಳ್ಳಾರಿ ಗ್ರಾಹಕರ ಜೇಬಿಗೆ ಕತ್ತರಿ – KMFನಿಂದ ಒಂದು ದರ, ಮಾರಾಟಕ್ಕೆ ಮತ್ತೊಂದು ದರ
Advertisement
Advertisement
ಭಾರತೀಯ ನ್ಯಾಯ ಸಂಹಿತೆಯು 358 ಸೆಕ್ಷನ್ ಒಳಗೊಂಡಿದೆ. 20 ಹೊಸ ಅಪರಾಧಗಳು ಸೇರಿಸಲ್ಪಟ್ಟಿವೆ, 33 ಅಪರಾಧಗಳ ಶಿಕ್ಷೆ ಅವಧಿ ಹೆಚ್ಚಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 531 ಸೆಕ್ಷನ್ ಒಳಗೊಂಡಿದೆ. 177 ಕಲಂಗಳನ್ನು ಬದಲಿಸಲಾಗಿದೆ. ಭಾರತೀಯ ಸಾಕ್ಷ್ಯ ಅಧಿನಿಯಮ 170 ಸೆಕ್ಷನ್ ಒಳಗೊಂಡಿದೆ. ಇದನ್ನೂ ಓದಿ: ಬ್ರಿಟಿಷರ ಕಾಲದ ಕ್ರಿಮಿನಲ್ ಕಾನೂನುಗಳಿಗೆ ಗುಡ್‌ಬೈ – ಇಂದಿನಿಂದ 3 ದೇಶಿ ಕಾನೂನು ಜಾರಿ
Advertisement
Advertisement
ಜುಲೈ 1 ರ ಮೊದಲು ದಾಖಲಾಗಿರುವ ಪ್ರಕರಣಗಳನ್ನು ಭಾರತೀಯ ದಂಡ ಸಂಹಿತೆ (IPC), ಕ್ರಿಮಿನಲ್ ಪ್ರೊಸೀಜರ್ ಕೋಡ್ (CRPC) ಹಾಗೂ ಇಂಡಿಯನ್ ಎವಿಡೆನ್ಸ್ ಆ್ಯಕ್ಟ್ ಅಡಿಯಲ್ಲಿ ವಿಚಾರಣೆಯನ್ನು ಮುಂದುವರಿಸಲಾಗುತ್ತದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಭಾರೀ ಮಳೆಗೆ ಕುಸಿದ ರಸ್ತೆ – ಮೋದಿ ತವರಲ್ಲಿ ಇದೆಂಥಾ ಘಟನೆ ಅಂತ ಕಾಂಗ್ರೆಸ್ ತೀವ್ರ ತರಾಟೆ