ಮೈಸೂರು: ಇಂದು ಆಷಾಢ ಮಾಸದ (Ashada Maasa) ಮೊದಲ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ (Chamundi Hills) ಸಂಭ್ರಮ ಆವರಿಸಿದೆ.
ಇಡೀ ಬೆಟ್ಟವನ್ನು ವಿಶೇಷ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ಚಾಮುಂಡಿ ತಾಯಿಗೆ (Goddess Chamundi) ವಿಶೇಷ ಪೂಜೆ ನಡೆಯುತ್ತಿದೆ. ತಾಯಿ ಚಾಮುಂಡಿ ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಉತ್ಸವ ಮೂರ್ತಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ದೇವಿಯ ದರ್ಶನಕ್ಕೆ ಬೆಳಗಿನ ಜಾವದಿಂದಲೇ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಇರಾನ್ ಮೇಲೆ ಮತ್ತೆ ದಾಳಿ – ರೈಲು, ವಿಮಾನ ನಿಲ್ದಾಣ ಟಾರ್ಗೆಟ್ ಮಾಡಿ ಹೊಡೆದ ಅಮೆರಿಕ
ಈ ಬಾರಿ 2 ಸಾವಿರ ರೂ. ಮೌಲ್ಯದ ಟಿಕೆಟ್ ಪಡೆದವರಿಗೆ ನೇರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಮುಂಜಾನೆ 5:30ರಿಂದ ಬೆಳಗ್ಗೆ 10 ಗಂಟೆಯವರೆಗೆ ವಿವಿಐಪಿಗಳಿಗೆ ದರ್ಶನಕ್ಕೆ ಅವಕಾಶವಿದೆ.
