– ರಾವಣನ ಅವತಾರದಲ್ಲಿ ರಾಕಿಂಗ್ ಸ್ಟಾರ್‌ನ ಲುಕ್
‘ರಾಕಿಂಗ್ ಸ್ಟಾರ್’ ಯಶ್ ಅಭಿಮಾನಿಗಳು (Yash Fans) ಕಳೆದ 3 ವರ್ಷಗಳಿಂದ ಕಾಯುತ್ತಿದ್ದು, ಮುಂದಿನ ವರ್ಷ ʻಟಾಕ್ಸಿಕ್ʼ ಮತ್ತು ʻರಾಮಾಯಣʼ ಸಿನಿಮಾಗಳ ಮೂಲಕ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ʻಟಾಕ್ಸಿಕ್ʼ 2026ರ ಮಾರ್ಚ್ 19ಕ್ಕೆ ಬಿಡುಗಡೆಯಾಗಲಿದ್ದು, ʻರಾಮಾಯಣʼ ಪಾರ್ಟ್-1 ದೀಪಾವಳಿಯ ಹೊತ್ತಿಗೆ ತೆರೆಯ ಮೇಲೆ ಬರಲಿದೆ. ಯಶ್ ನಟನೆಯ ಈ ಎರಡೂ ದಿನಿಮಾಗಳು ಭರ್ಜರಿ ಹಿಟ್ ಆಗಲಿದೆ, ಜೊತೆಗೆ ಯಶ್ ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಲಿವೆ ಎಂದು ನಿರೀಕ್ಷಿಸಲಾಗಿದೆ.
ಈ ನಡುವೆ ಚಿತ್ರತಂಡದಿಂದ ರಾಮಾಯಣ ಪಾರ್ಟ್-1 (Ramayana Part-1) ಚಿತ್ರದ ಫಸ್ಟ್ ಗ್ಲಿಂಪ್ಸ್ ಮುಂದಿನ ಮೇ 1 ರಿಂದ 4ರ ವರೆಗೆ ನಡೆಯಲಿರುವ ವಿಶ್ವ ಆಡಿಯೋ ವಿಷುಯಲ್ & ಎಂಟರ್ಟೈನ್ಮೆಂಟ್ ಶೃಂಗಸಭೆ (ಅಕಾ WAVES ಶೃಂಗಸಭೆ)ಯಲ್ಲಿ ರಿಲೀಸ್ ಆಗಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ತಮನ್ನಾಗೆ ಬಿಗ್ ಚಾನ್ಸ್- ಬಾಲಿವುಡ್‌ನ ಹೊಸ ಚಿತ್ರಕ್ಕೆ ಮಿಲ್ಕಿ ಬ್ಯೂಟಿ ನಾಯಕಿ
ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸಿದ್ದು, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ, ಸ್ಯಾಂಡಲ್‌ವುಡ್‌ನ ರಾಕಿಂಗ್‌ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಲಾರಾ ದತ್ತ, ಸನ್ನಿ ಡಿಯೋಲ್ ಮತ್ತು ಇಂದಿರಾ ಕೃಷ್ಣ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಾಗಿ ರಣಬೀರ್ ಕಪೂರ್ ಅಭಿಮಾನಿಗಳೂ ಸಹ ಕಾತುರದಿಂದ ಕಾಯ್ತಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಯಕ್ಷಗಾನ ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾವು 2026ರ ಮಾರ್ಚ್ 19ರಂದು ತೆರೆಗೆ ಬರಲಿದೆ. ಇದು ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾವಾಗಿದ್ದು, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ತಯಾರಾಗುತ್ತಿದೆ. ಕೆವಿಎನ್ ಸಂಸ್ಥೆ ಮತ್ತು ಯಶ್ ಜಂಟಿಯಾಗಿ ಈ ಸಿನಿಮಾಕ್ಕೆ ಹಣ ಹಾಕಿದ್ದಾರೆ. ಇದರ ಜೊತೆಗೆ ನಿತೇಶ್ ತಿವಾರಿ ಅವರ ‘ರಾಮಾಯಣ: ಪಾರ್ಟ್ 1’ ಸಿನಿಮಾದಲ್ಲೂ ಯಶ್ ನಟಿಸಲಿದ್ದು, ಅದರಲ್ಲಿನ ರಾವಣನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಈ ಚಿತ್ರ ಕೂಡ 2026ರ ದೀಪಾವಳಿ ಹಬ್ಬದ ಸಮಯದಲ್ಲಿ ತೆರೆಗೆ ಬರಲಿದೆ. ಇದನ್ನೂ ಓದಿ: ಉಗ್ರರ ದಾಳಿ ಸ್ಥಳದಲ್ಲೇ ಮಾರ್ಟಿನ್ ಸಿನಿಮಾ ಶೂಟಿಂಗ್ ನಡೆದಿತ್ತು, ಆಗ ಸೆಕ್ಯೂರಿಟಿ ಚೆನ್ನಾಗಿತ್ತು: ಧ್ರುವ ಸರ್ಜಾ