ಪಣಜಿ: ಪಾಕಿಸ್ತಾನದ ವಿದೇಶಾಂಗ ಸಚಿವ (Pakistan Foreign Minister) ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto) ಅವರು ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಪಾಲ್ಗೊಳ್ಳಲು ಗುರುವಾರ ಗೋವಾಕ್ಕೆ ಆಗಮಿಸಿದ್ದಾರೆ.
ಕಳೆದ 12 ವರ್ಷಗಳಿಂದ ಭಾರತಕ್ಕೆ (India) ಪಾಕಿಸ್ತಾನದಿಂದ (Pakistan) ಯಾವುದೇ ವಿದೇಶಾಂಗ ಸಚಿವರು ಭೇಟಿ ನೀಡಿರಲಿಲ್ಲ. ಇದೀಗ ಬುಲಾವಲ್ ಭುಟ್ಟೋ ಅವರು 12 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನದ ಮೊದಲ ಹಿರಿಯ ನಾಯಕ ಎನಿಸಿಕೊಂಡಿದ್ದಾರೆ.
Advertisement
#WATCH | EAM Dr S Jaishankar welcomes Pakistan’s Foreign Minister Bilawal Bhutto Zardari for the Meeting of the SCO Council of Foreign Ministers in Goa pic.twitter.com/TVe0gzml1U
— ANI (@ANI) May 5, 2023
Advertisement
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಗಡಿಯಾಚೆಗೆ ಭಯೋತ್ಪಾದಕರ ಕಾರ್ಯಾಚರಣೆ ಸೇರಿದಂತೆ ಹಲವಾರು ವಿಷಯಗಳಿಂದಾಗಿ ಉಭಯ ದೇಶಗಳ ನಡುವೆ ಸಂಘರ್ಷಗಳು ಮುಂದುವರಿದ ಒತ್ತಡದ ನಡುವೆಯೇ ಭುಟ್ಟೋ ಭಾರತಕ್ಕೆ ಭೇಟಿ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.
Advertisement
ಗೋವಾದ ವಿಮಾನ ನಿಲ್ದಾಣಕ್ಕೆ ಬಿಲಾವಲ್ ಭುಟ್ಟೋ ಆಗಮಿಸಿದಾಗ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪಾಕಿಸ್ತಾನ-ಅಫ್ಘಾನಿಸ್ತಾನ-ಇರಾನ್ ವಿಭಾಗದ ಜಂಟಿ ಕಾರ್ಯದರ್ಶಿ ಜೆಪಿ ಸಿಂಗ್ ಸ್ವಾಗತಿಸಿದರು.
Advertisement
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಭುಟ್ಟೋ, ಶಾಂಘೈ ಸಹಕಾರ ಸಂಘದ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗಿಯಾಗಲು ಗೋವಾಗೆ ಬಂದಿರುವುದು ಹಾಗೂ ಈ ಸಭೆಯಲ್ಲಿ ಪಾಕಿಸ್ತಾನದ ನಿಯೋಗವನ್ನು ಮುನ್ನಡೆಸುತ್ತಿರುವುದು ನನಗೆ ಸಂತೋಷ ತಂದಿದೆ. ವಿದೇಶಾಂಗ ಸಚಿವರ ಸಭೆ ಯಶಸ್ವಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ – ರಕ್ಷಣಾ ಸಂಸ್ಥೆಯ ವಿಜ್ಞಾನಿ ಅರೆಸ್ಟ್
ಭುಟ್ಟೋ ಜರ್ದಾರಿ 2 ದಿನಗಳ ಗೋವಾ ಭೇಟಿಯಲ್ಲಿದ್ದರೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆಗೆ ಪಾಕಿಸ್ತಾನದ ಕಡೆಯಿಂದ ಯಾವುದೇ ಮನವಿ ಬಂದಿಲ್ಲ. ಈ ಕಾರಣ ದ್ವಿಪಕ್ಷೀಯ ಸಭೆಯ ಯೋಜನೆ ಇಲ್ಲ ಎನ್ನಲಾಗಿದೆ.
ಈ ಹಿಂದೆ 2011 ರಲ್ಲಿ ಪಾಕಿಸ್ತಾನದ ಆಗಿನ ವಿದೇಶಾಂಗ ಸಚಿವೆ ಹೀನಾ ರಬ್ಬಾನಿ ಖಾರ್ ಅವರು ಭಾರತಕ್ಕೆ ಭೇಟಿ ನೀಡಿದ್ದರು. ಅಂದಿನ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ಅವರೊಂದಿಗೆ ಮಾತುಕತೆ ನಡೆಸಿದರು. ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾಚಾರ ಹಿನ್ನೆಲೆ – ಕರ್ನಾಟಕದಲ್ಲಿ ಅಮಿತ್ ಶಾ ಕಾರ್ಯಕ್ರಮಗಳು ರದ್ದು