ಲಂಡನ್: ನಾಟಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಿರುವ ರಿಷಭ್ ಪಂತ್, ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ ಸಿಕ್ಸರ್ ಸಿಡಿಸಿ ರನ್ ಖಾತೆ ತೆರೆದ ಮೊದಲ ಭಾರತದ ಬ್ಯಾಟ್ಸ್ ಮನ್ ಎಂಬ ದಾಖಲೆ ಬರೆದಿದ್ದಾರೆ.
ಟೀಂ ಇಂಡಿಯಾ ಪರ ಪಾದಾರ್ಪಣೆ ಪಂದ್ಯದಲ್ಲಿ ಎದುರಿಸಿದ 2ನೇ ಎಸೆತದಲ್ಲೇ ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯನ್ನು ರಿಷಭ್ ಪಂತ್ ಪಡೆದರು. ವಿಶ್ವ ಕ್ರಿಕೆಟ್ ಆಟಗಾರರ ಈ ಪಟ್ಟಿಯಲ್ಲಿ ರಿಷಭ್ 12ನೇ ಆಟಗಾರ ಎನಿಸಿಕೊಂಡಿದ್ದಾರೆ.
https://twitter.com/1stAxiom/status/1030874179191623680
ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ನಲ್ಲಿ ದಿನೇಶ್ ಕಾರ್ತಿಕ್ ನೀರಸ ಪ್ರದರ್ಶನ ನೀಡಿದ ಕಾರಣದಿಂದ 20 ವರ್ಷದ ರಿಷಭ್ ಪಂತ್ ಸ್ಥಾನ ಗಿಟ್ಟಿಸಿಕೊಂಡಿದ್ದರು. ಈ ಮೂಲಕ ಭಾರತದ 291ನೇ ಟೆಸ್ಟ್ ಆಟಗಾರ ಎನಿಸಿಕೊಂಡರು.
ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿಗೆ 18 ಆಟಗಾರರ ಬೃಹತ್ ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿತ್ತು. ಈ ಪಟ್ಟಿಯಲ್ಲಿ ರಿಷಭ್ ಪಂತ್ ಹಾಗೂ ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದರು. ಧೋನಿ ಬಳಿಕ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ನಲ್ಲಿ ಸಮರ್ಥ ಕೀಪರ್ ಹಾಗೂ ಬ್ಯಾಟ್ಸ್ ಮನ್ ಕೊರತೆಯನ್ನು ಎದುರಿಸುತ್ತಿದೆ. ಸದ್ಯ ರಿಷಭ್ ಪಂತ್ ವಿಕೆಟ್ ಕೀಪರ್ ಸ್ಥಾನ ಪಡೆದಿದ್ದು ಉತ್ತಮ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲಿದ್ದರಾ ಎಂಬುವುದನ್ನು ಕಾದು ನೋಡಬೇಕಿದೆ. ಸದ್ಯ 3ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯದ ವೇಳೆ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 307 ರನ್ ಗಳಿಸಿದೆ. ರಿಷಭ್ ಪಂತ್ 22 ರನ್ (4 ಬೌಂಡರಿ, 1 ಸಿಕ್ಸರ್) ಸಿಡಿಸಿ ಬ್ಯಾಟಿಂಗ್ ಕಾಯ್ದು ಕೊಂಡಿದ್ದಾರೆ.
Rishabh Pant is the 12th player in Test cricket to get off the mark with a SIX! #ENGvIND Complete List: pic.twitter.com/RBpnn5nLHF
— Sampath Bandarupalli (@SampathStats) August 18, 2018