ಇದೇ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ತಮಿಳಿನ ಖ್ಯಾತ ನಟ ಧನುಷ್ (Dhanush) ಒಟ್ಟಾಗಿ ನಟಿಸುತ್ತಿದ್ದಾರೆ. ಇದೊಂದು ತಮಿಳು ಸಿನಿಮಾವಾಗಿದ್ದು, ಶಿವಣ್ಣ ಈ ಸಲ ಏಕಕಾಲಕ್ಕೆ ಎರಡೂ ತಮಿಳು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಅದರಲ್ಲಿ ಧನುಷ್ ಜೊತೆಗಿನ ಕ್ಯಾಪ್ಟ್ ಮಿಲ್ಲರ್ (Captain Miller) ಸಿನಿಮಾ ಕೂಡ ಒಂದು.
ಮೊನ್ನೆಯಷ್ಟೇ ಇಡೀ ಸಿನಿಮಾದ ಶೂಟಿಂಗ್ ಮುಗಿದಿರುವ ಕುರಿತು ಶಿವರಾಜ್ ಕುಮಾರ್ ಮಾಹಿತಿಯನ್ನು ಹಂಚಿಕೊಂಡಿದ್ದರು. ತಮ್ಮ ಭಾಗದ ಚಿತ್ರೀಕರಣ ಮುಗಿದಿದೆ ಎಂದು ಮತ್ತು ಸಿನಿಮಾದ ಬಹುತೇಕ ಶೂಟಿಂಗ್ ಕೂಡ ಮುಗಿಸಲಾಗಿದೆ ಎನ್ನುವ ವಿಷಯ ಹೇಳಿಕೊಂಡಿದ್ದರು. ಇದೀಗ ಸಿನಿಮಾ ತಂಡದಿಂದ ಮತ್ತೊಂದು ಮಾಹಿತಿ ಬಂದಿದೆ. ಸಿನಿಮಾದ ಫಸ್ಟ್ ಲುಕ್ (First Look) ಅನ್ನು ಜೂನ್ 30 ರಂದು ರಿಲೀಸ್ ಮಾಡುವುದಾಗಿ ತಂಡ ತಿಳಿಸಿದೆ. ಇದನ್ನೂ ಓದಿ:ಕಿಚ್ಚನ ಮುಂದಿನ ಚಿತ್ರಕ್ಕೆ ಹೊಸ ನಿರ್ದೇಶಕ: ಅವರನ್ನ ಬಿಟ್ಟು ಇವರಾರು?
ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ (Shivraj Kumar) ಯಾವ ರೀತಿಯ ಪಾತ್ರವನ್ನು ಮಾಡಿರಬಹುದು ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿ ಇದ್ದೇ ಇದೆ. ಆಕಸ್ಮಿಕ ಎನ್ನುವಂತೆ ಸಿನಿಮಾದ ಕೆಲವು ವಿಷಯಗಳು ಸೋರಿಕೆಯಾಗಿವೆ. ಅಂದರೆ, ಶಿವರಾಜ್ ಕುಮಾರ್ ಅವರಿಗೆ ಕೇಶವಿನ್ಯಾಸ ಮಾಡುತ್ತಿರುವ ರಾಜು ಎನ್ನುವವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪಾತ್ರ ಮತ್ತು ಸಿನಿಮಾದ ಕಥೆಯನ್ನೂ ಅವರು ಬಿಟ್ಟುಕೊಟ್ಟಿದ್ದಾರೆ.
ಕಾಡು ಜನರು ಮತ್ತು ಬ್ರಿಟಿಷ್ ರ ನಡುವಿನ ಹೋರಾಟದ ಕಥೆಯನ್ನು ಕ್ಯಾಪ್ಟನ್ ಮಿಲ್ಲರ್ ನಲ್ಲಿ ಹೇಳುತ್ತಿದ್ದಾರಂತೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಾಡು ಜನರ ಪಾತ್ರದಲ್ಲಿ ಶಿವಣ್ಣ ಮತ್ತು ಧನುಷ್ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಧನುಷ್ ಅಣ್ಣನ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರಂತೆ.
Web Stories