ಪಣಜಿ: ಯುಕೆಯಿಂದ ಹಿಂದಿರುಗಿದ 8 ವರ್ಷದ ಬಾಲಕನಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಪತ್ತೆಯಾಗಿದೆ. ಈ ಮೂಲಕ ಗೋವಾದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ವರದಿಯಾಗಿದೆ.
ಡಿಸೆಂಬರ್ 17 ರಂದು ಇಂಗ್ಲೆಂಡ್‍ನಿಂದ ಆಗಮಿಸಿದ 8 ವರ್ಷದ ಬಾಲಕನಲ್ಲಿ ಓಮಿಕ್ರಾನ್ ಪತ್ತೆಯಾಗಿದ್ದು, ಇದು ರಾಜ್ಯದಲ್ಲಿ ದಾಖಲಾದ ಮೊದಲ ಓಮಿಕ್ರಾನ್ ಪ್ರಕರಣ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸೋಮವಾರ ತಿಳಿಸಿದ್ದಾರೆ.
Advertisement
ಬಾಲಕನ ಗಂಟಲ ದ್ರವ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಸಿದ್ದು, ಅಲ್ಲಿ ಓಮಿಕ್ರಾನ್ ದೃಢಪಟ್ಟಿದೆ. ಇದನ್ನೂ ಓದಿ: ನೈಟ್ ಕರ್ಫ್ಯೂ ಮಾಡುವ ಬದಲು ಬೆಳಗ್ಗೆಯಿಂದಲೇ ಕರ್ಫ್ಯೂ ಜಾರಿ ಮಾಡಿ: ರೆಸಾರ್ಟ್ ಮಾಲೀಕರ ಅಕ್ರೋಶ
Advertisement
Advertisement
ಭಾರತ ಸರ್ಕಾದ ಮಾರ್ಗಸೂಚಿಯ ಪ್ರಕಾರ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಹಾಗೂ ತಜ್ಞರ ಸಲಹೆಯ ಮೇರೆಗೆ ಗೋವಾ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ವಿಶ್ವಜಿತ್ ರಾಣೆ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
Advertisement
ಭಾನುವಾರ ಗೋವಾದಲ್ಲಿ 25 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 1,80,050 ಮಂದಿಗೆ ಸೋಂಕು ಬಂದಿದ್ದು, 3,519 ಸಾವುಗಳು ಸಂಭವಿಸಿದೆ. ಇಲ್ಲಿಯವರೆಗೆ ಭಾರತದಲ್ಲಿ ಓಮಿಕ್ರಾನ್ ರೂಪಾಂತರದ 578 ಪ್ರಕರಣಗಳು ದಾಖಲಾಗಿದೆ. ಇದನ್ನೂ ಓದಿ: 15 ರಿಂದ 18 ವರ್ಷದವರು ಜ. 1ರಿಂದ ಕೋವಿನ್‌ನಲ್ಲಿ ಲಸಿಕೆಗೆ ಹೆಸರು ನೋಂದಾಯಿಸಬಹುದು