ವಾಷಿಂಗ್ಟನ್: ಸುಮಾರು ಒಂದು ದಶಕದ ನಂತರ ಅಮೆರಿಕದಲ್ಲಿ ಮೊದಲ ಪೋಲಿಯೊ ಪ್ರಕರಣ ದೃಢಪಟ್ಟಿದೆ. ನ್ಯೂಯಾರ್ಕ್‌ನ ರಾಕ್‌ಲ್ಯಾಂಡ್ ಕೌಂಟಿಯಲ್ಲಿ ಪೋಲಿಯೊ ಪ್ರಕರಣ ವರದಿಯಾಗಿದೆ ಎಂದು ಸ್ಥಳೀಯ ಮತ್ತು ರಾಜ್ಯ ಆರೋಗ್ಯ ಅಧಿಕಾರಿಗಳು ಘೋಷಿಸಿದ್ದಾರೆ.
ಜೂನ್‌ನಲ್ಲಿ 20 ವರ್ಷದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಪೋಲಿಯೊ ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಪೋಲಿಯೊ ಸೋಂಕಿಗೆ ಒಳಗಾದವರಲ್ಲಿ ಶೇ.95 ಜನರು ಯಾವುದೇ ರೋಗಲಕ್ಷಣಗಳನ್ನು ಹೊಂದಿಲ್ಲ. ಆದರೂ ಅವರು ಇನ್ನೂ ವೈರಸ್ ಅನ್ನು ಹರಡಬಹುದು ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ಯುಎಸ್ ಅಧ್ಯಕ್ಷ ಜೋ ಬೈಡನ್‍ಗೆ ಕೋವಿಡ್ ಪಾಸಿಟಿವ್
Advertisement
Advertisement
ಕೌಂಟಿ ಹೆಲ್ತ್ ಕಮಿಷನರ್ ಡಾ. ಪೆಟ್ರಿಸಿಯಾ ಷ್ನಾಬೆಲ್ ರಪ್ಪರ್ಟ್, ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಕೌಂಟಿ ನಿವಾಸಿಗಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ನ್ಯೂಯಾರ್ಕ್ ರಾಜ್ಯ ಆರೋಗ್ಯ ಇಲಾಖೆ ಹಾಗೂ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
Advertisement
ಪೋಲಿಯೊ ನಿಯಂತ್ರಣಕ್ಕೆ ಲಸಿಕೆ ಕಂಡುಹಿಡಿದಿದ್ದರೂ ಅದನ್ನು ಸಂಪೂರ್ಣ ಮುಕ್ತ ಮಾಡಲು ಸಾಧ್ಯವಾಗಿಲ್ಲ. ನಿಮ್ಮ ಮಗು ಮತ್ತು ಸಮುದಾಯದ ಒಳಿತಿಗಾಗಿ ಸೂಕ್ತ ಕೆಲಸ ಮಾಡಿ. ನಿಮ್ಮ ಮಗುವಿಗೆ ಈಗಲೇ ಲಸಿಕೆ ಹಾಕಿಸಿ ಎಂದು ಕೌಂಟಿ ಎಕ್ಸಿಕ್ಯೂಟಿವ್ ಎಡ್ ಡೇ ತಿಳಿಸಿದ್ದಾರೆ. ಇದನ್ನೂ ಓದಿ: ಇಟಲಿ ಪ್ರಧಾನಿ ದ್ರಾಘಿ ರಾಜೀನಾಮೆ
Advertisement
ರೋಗಿಯು ಡಿಸ್ಚಾರ್ಜ್ ಆಗಿದ್ದು, ಹೆಂಡತಿ ಮತ್ತು ಮಕ್ಕಳೊಂದಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ವ್ಯಕ್ತಿಯು ನಿಲ್ಲಲು ಸಾಧ್ಯವಾಗುತ್ತದೆ. ಆದರೆ ನಡೆಯಲು ಕಷ್ಟಪಡುತ್ತಾನೆ ಎಂದು ತಿಳಿಸಿದೆ.
ಪೋಲಿಯೊ ಒಂದು ವೈರಲ್ ಕಾಯಿಲೆಯಾಗಿದ್ದು, ನರಕೋಶ ವ್ಯವಸ್ಥೆಯ ಮೇಲೆ ಪರಿಣಾಮ ಬೀರಬಹುದು. ಇದು ಸ್ನಾಯು ದೌರ್ಬಲ್ಯವನ್ನು ಉಂಟುಮಾಡುತ್ತದೆ. ಕೆಲವು ಸಂದರ್ಭಗಳಲ್ಲಿ ಪಾರ್ಶ್ವವಾಯು ಅಥವಾ ಸಾವಿಗೆ ಕಾರಣವಾಗುತ್ತದೆ.