ಕೋಲಾರ: ಕೈಗಾರಿಕೆಗಳಲ್ಲಿ (Industry) ಕನ್ನಡಿಗರಿಗೆ (Kannadigas) ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ.
ಕೋಲಾರ ಗಾಂಧಿವನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವ ಕುರಿತು ಈಗಾಗಲೇ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಲಾಗಿದೆ. ಸರೋಜಿನಿ ಮಹಿಷಿ ವರದಿಯ ಅನುಸಾರ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಸರ್ಕಾರ ಒತ್ತಾಯಿಸುತ್ತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಅವರು ದೊಡ್ಡ ದೊಡ್ಡ ಉದ್ಯಮಿಗಳ ಸಭೆ ಕರೆದು ಚರ್ಚೆ ನಡೆಸಲಿದ್ದಾರೆ ಎಂದರು. ಇದನ್ನೂ ಓದಿ: ಸ್ಟಿಂಗ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮೊದಲ ಬಾರಿಗೆ ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸಿದ ಪೊಲೀಸರು
ಬೇರೆ ರಾಜ್ಯದವರು ಕರ್ನಾಟಕಕ್ಕೆ ಬರಲಿ, ಆದರೆ ನಮ್ಮ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ಸಿಗಬೇಕು ಇಲ್ಲದಿದ್ದರೆ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಸಿಗುವುದು ಕಷ್ಟವಾಗಲಿದೆ. ಇನ್ನು ನಾಮಫಲಕಗಳಲ್ಲಿ 60%ರಷ್ಟು ಕನ್ನಡ ಕಡ್ಡಾಯವಾಗಿರಬೇಕು. ಉಳಿದ 40%ರಷ್ಟು ಬೇರೆ ಭಾಷೆ ಬಳಸಬಹುದು 100%ರಷ್ಟು ಕನ್ನಡ ಬಳಸಿದರೆ ಇನ್ನೂ ಉತ್ತಮ. ಇನ್ನೂ ಈಗಾಗಲೇ ಈ ಕುರಿತು ಕಾನೂನು ಇದ್ದು, ಎಲ್ಲರೂ ಪಾಲಿಸಬೇಕು. ಹೊರರಾಜ್ಯಗಳಿಂದ ಬಂದವರು ಕನ್ನಡ ಕಲಿಯಬೇಕು ಇದರಿಂದ ವ್ಯಾಪಾರ ವಹಿವಾಟಿಗೂ ಅನುಕೂಲವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ರಾಯಚೂರು | ವ್ಯಾಪಾರದಲ್ಲಿ ನಷ್ಟ; ಪತ್ನಿ, ಇಬ್ಬರು ಮಕ್ಕಳನ್ನ ಕೊಂದು ವ್ಯಾಪಾರಿ ಆತ್ಮಹತ್ಯೆ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳಿಂದ ವಾಯುಮಾಲಿನ್ಯ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಸುಪ್ರೀಂಕೋರ್ಟ್ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬೇಕು, ಹಸಿರು ಪಟಾಕಿಗಳಿಗೆ ಆದ್ಯತೆ ನೀಡಬೇಕು. ಒಂದು ದೀಪ ಹಚ್ಚುವ ಬದಲು ಹತ್ತು ದೀಪ ಹಚ್ಚಿ. ಪಟಾಕಿ ಬಳಕೆಯನ್ನು ಕಡಿಮೆ ಮಾಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಮಕ್ಕಳು, ವೃದ್ಧರು ಹಾಗೂ ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಪಟಾಕಿ ಹೊಗೆಯಿಂದ ತೊಂದರೆಯಾಗಬಹುದು. ಹೀಗಾಗಿ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಕರೆ ನೀಡಿದರು. ಇದನ್ನೂ ಓದಿ: ಎಸ್ಐಆರ್ ಅಕ್ರಮದಲ್ಲಿ ಮೋದಿ, ಅಮಿತ್ ಶಾ, ಜ್ಞಾನೇಶ್ ಕುಮಾರ್ ಆರೋಪಿಗಳು: ಪ್ರಿಯಾಂಕ್ ಖರ್ಗೆ
ಇನ್ನು 2011ರ ಕೆಎಎಸ್ ನೇಮಕಾತಿ ರದ್ದು ವಿಚಾರವಾಗಿ ಮಾತನಾಡಿದ ಸಚಿವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕಾತಿ ನಡೆದಿತ್ತು. ನಂತರ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿತ್ತು. ಆದರೆ ಸುಪ್ರೀಂಕೋರ್ಟ್ ಕಾನೂನು ತಿದ್ದುಪಡಿ ಸರಿಯಲ್ಲ ಎಂದು ಹೇಳಿದೆ. ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನವೆಂಬರ್ 5ರಿಂದ ಸಾರಿಗೆ ಬಸ್ ದರ ಏರಿಕೆ ಸಾಧ್ಯತೆ: ಬೈರತಿ ಸುರೇಶ್
