ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಇತರ ಸರ್ಕಾರಿ ಹಾಸ್ಟೆಲ್‌ಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಪ್ರಕಟಿಸಿದೆ.
ಈ ಸೀಟು ಹಂಚಿಕೆಗೆ ಏನಾದರೂ ಆಕ್ಷೇಪಣೆಗಳು ಅಥವಾ ಬದಲಾವಣೆಗಳು ಇದ್ದಲ್ಲಿ ಮೇ 21ರೊಳಗೆ ಆಯಾ ಶಾಲೆಗಳಲ್ಲಿಯೇ ಲಿಖಿತವಾಗಿ ಸಲ್ಲಿಸಲು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ಅವರು ಸೂಚಿಸಿದ್ದಾರೆ.

