ಗಾಂಧಿನಗರ: ಇದೇ ಮೊದಲ ಬಾರಿಗೆ ಐಪಿಎಲ್ (IPL) ಇತಿಹಾಸದಲ್ಲಿ ಅಣ್ಣ ತಮ್ಮ ಇಬ್ಬರು ಎದುರಾಳಿಗಳಾಗಿ ಕಣಕ್ಕಿಳಿದಿದ್ದಾರೆ. 16ನೇ ಐಪಿಎಲ್ ಆವೃತ್ತಿಯಲ್ಲಿ ಭಾನುವಾರ ನಡೆಯುತ್ತಿರುವ ಗುಜರಾತ್ ಟೈಟಾನ್ಸ್ (Gujarat Titans) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ನಡುವಿನ ಪಂದ್ಯವೂ ಸಹೋದರರ ಸವಾಲ್‍ಗೆ ವೇದಿಕೆಯಾಗಿದೆ.
ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ (Hardik Pandya) ಹಾಗೂ ಲಕ್ನೋ ತಂಡದ ನಾಯಕನಾಗಿ ಕೃನಾಲ್ ಪಾಂಡ್ಯ (Krunal Pandya) ಕಣಕ್ಕಿಳಿದಿದ್ದಾರೆ. ಬಲಿಷ್ಠ ಬ್ಯಾಟಿಂಗ್ ಹಾಗೂ ಬೌಲಿಂಗ್ ಪಡೆಗಳನ್ನು ಹೊಂದಿರುವ ಇತ್ತಂಡದ ನಾಯಕರು ಕಣದಲ್ಲಿ ಅಬ್ಬರಿಸುತ್ತಿದ್ದಾರೆ. ಇದನ್ನೂ ಓದಿ: ಶೇಕ್‍ಹ್ಯಾಂಡ್ ವಿವಾದಕ್ಕೆ ತೆರೆ ಎಳೆದ ಕೊಹ್ಲಿ, ಗಂಗೂಲಿ
Advertisement
Advertisement
ಐಪಿಎಲ್ ಫ್ರಾಂಚೈಸಿಯಲ್ಲಿ ಈ ಹಿಂದೆ ಅನೇಕ ಸಹೋದರರು ಎದುರಾಳಿಗಳಾಗಿ ಕಣಕ್ಕಿಳಿದಿದ್ದಾರೆ. ಆದ್ರೆ ಇದೇ ಮೊದಲ ಬಾರಿಗೆ ನಾಯಕರಾಗಿ ಅಣ್ಣ ತಮ್ಮ ಕಣದಲ್ಲಿ ಅಬ್ಬರಿಸುತ್ತಿರುವುದು ರೋಚಕವಾಗಿದೆ. ಕಳೆದ ವಾರ ಆರ್‌ಸಿಬಿ (RCB) ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಕೆ.ಎಲ್ ರಾಹುಲ್ (KL Rahul) ಗಾಯಕ್ಕೆ ತುತ್ತಾಗಿದ್ದರಿಂದ ಕೃನಾಲ್ ಪಾಂಡ್ಯ ನಾಯಕತ್ವ ವಹಿಸಿಕೊಂಡಿದ್ದಾರೆ.
Advertisement
ಇನ್ನೂ 2022ರಲ್ಲಿ ಮೊದಲಬಾರಿಗೆ ಐಪಿಎಲ್ ಪ್ರವೇಶಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವದಲ್ಲಿ ಚೊಚ್ಚಲ ಆವೃತ್ತಿಯಲ್ಲೇ ಪ್ರಶಸ್ತಿ ಗೆಲ್ಲುವ ಮೂಲಕ ಪಾಂಡ್ಯ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ಇತ್ತಂಡಗಳಿಗೂ ಇದು ಸವಾಲಿನ ಪಂದ್ಯವಾಗಿದೆ.
Advertisement
2023ರ ಆವೃತ್ತಿಯಲ್ಲಿ 10 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿರುವ ಗುಜರಾತ್ ತಂಡ 14 ಅಂಕಗಳೊಂದಿಗೆ ಟಾಪ್ 1 ಸ್ಥಾನದಲ್ಲಿದೆ. ಆದ್ರೆ 10 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿರುವ ಲಕ್ನೋ 11 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗುಜರಾತ್ ಗೆದ್ದರೆ ಪ್ಲೇ ಆಫ್ ಪ್ರವೇಶಿಸಲಿದೆ. ಲಕ್ನೋ ಗೆದ್ದರೆ ಟಾಪ್ 2ನೇ ಸ್ಥಾನಕ್ಕೆ ಬರಲಿದೆ.
ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್, ಕೈಲ್ ಮೇಯರ್ಸ್, ದೀಪಕ್ ಹೂಡಾ, ಕರಣ್ ಶರ್ಮಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಸ್ವಪ್ನಿಲ್ ಸಿಂಗ್, ಯಶ್ ಠಾಕೂರ್, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್ ಮತ್ತು ಅವೇಶ್ ಖಾನ್.
ಇಂಪ್ಯಾಕ್ಟ್ ಪ್ಲೇಯರ್ಸ್: ಆಯುಷ್ ಬಡೋನಿ, ಅಮಿತ್ ಮಿಶ್ರಾ, ಡೇನಿಯಲ್ ಸಾಮ್ಸ್, ಯದ್ವೀರ್ ಸಿಂಗ್ ಮತ್ತು ಪ್ರೇರಕ್ ಮಂಕಡ್.
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ, ಶುಬ್ಮನ್ ಗಿಲ್, ಹಾರ್ದಿಕ್ ಪಾಂಡ್ಯ, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್ ಮತ್ತು ಮೊಹಮ್ಮದ್ ಶಮಿ.
ಇಂಪ್ಯಾಕ್ಟ್ ಪ್ಲೇಯರ್ಸ್: ಅಲ್ಜಾರಿ ಜೋಸೆಫ್, ದಸುನ್ ಶನಕ, ಕೆಎಸ್ ಭರತ್, ಶಿವಂ ಮಾವಿ ಮತ್ತು ಜಯಂತ್ ಯಾದವ್. ಇದನ್ನೂ ಓದಿ: RCBಯನ್ನು ಹುರಿದು ಮುಕ್ಕಿದ ಡೆಲ್ಲಿ – ಕ್ಯಾಪಿಟಲ್ಸ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ