ಕೋಲಾರ: ಕಳೆದ ಐದು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಇದೇ ಮೊದಲ ಬಾರಿಗೆ ಯರಗೋಳ ಡ್ಯಾಂ ಭರ್ತಿಯಾಗಿದೆ.
ಬಂಗಾರಪೇಟೆ ತಾಲೂಕಿನ ಯರಗೋಳ ಡ್ಯಾಂ, ಸುಮಾರು 100 ಅಡಿ ಎತ್ತರವಿದ್ದು ಈಗ ಸಂಪೂರ್ಣ ಭರ್ತಿಯಾಗಿದೆ. ಬಯಲುಸೀಮೆ ಏಕೈಕ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಡ್ಯಾಂ ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.
Advertisement
Advertisement
ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣ ಸೇರಿ 45 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಈ ಯರಗೋಳ್ ಯೋಜನೆ ಸಹಕಾರಿಯಾಗಲಿದೆ. ಇದನ್ನೂ ಓದಿ: ರಸ್ತೆಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ್
Advertisement
ಇತ್ತೀಚೆಗೆ ಬಂದ ಮಳೆಗೆ ಕಳೆದ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಲಾಶಯ ಇಂದು ತುಂಬಿರುವುದು ಜಿಲ್ಲೆಯ ಜನರಲ್ಲಿ ಖುಷಿ ತಂದುಕೊಟ್ಟಿದೆ. ಸುಮಾರು 315 ಕೋಟಿ ರೂ. ವೆಚ್ಚದಲ್ಲಿ ಡ್ಯಾಂ ನಿರ್ಮಾಣ ಮಾಡಲಾಗಿದೆ.