ಕಾರವಾರ: ಡೆಂಗ್ಯೂ ಜ್ವರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ (24) ಡೆಂಗ್ಯೂಗೆ ಬಲಿಯಾದ ಯುವಕ.
ಈತ ಸಾಗರಶ್ರೀ ಬೋಟ್‌ನಲ್ಲಿ ಮೀನುಗಾರನಾಗಿ ಕಾರ್ಯನಿರ್ವಹಿಸುತ್ತಿದ್ದು, ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತಿದ್ದ. ಆದರೆ ಚಿಕಿತ್ಸೆ ಫಲಿಸದೇ ಯುವಕ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಪ್ರೀತಿಸಿದವನ ಜೊತೆ ಮನೆಬಿಟ್ಟು ಹೋದ ಮಗಳು – ತಂದೆ ನೇಣಿಗೆ ಶರಣು
ಭಟ್ಕಳದ ಬಂದರಿನಲ್ಲಿ ಮೀನುಗಾರಿಕೆ ವೃತ್ತಿ ಮಾಡುತ್ತಿರುವ ಇನ್ನೂ ಇಬ್ಬರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಅವರು ಸಹ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಭಟ್ಕಳ ಬಂದರಿನಲ್ಲಿ ಶುಚಿತ್ವ ಇಲ್ಲದ ಕಾರಣ ಹೆಚ್ಚು ಸೊಳ್ಳೆಗಳ ಉತ್ಪತ್ತಿಯಾಗುತಿದ್ದು, ಈ ಭಾಗದಲ್ಲಿ ಹಲವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮರ್ಯಾದಾ ಹತ್ಯೆ; ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ತಂದೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]