ಚಿಕ್ಕಮಗಳೂರು: ಹಸೆಮಣೆ ಏರುವ ಮುನ್ನ ಮದುಮಗಳಾಗಿ (Bride) ಅಲಂಕಾರಗೊಂಡು ಯುವತಿ ತನ್ನ ಬೂತ್‌ನಲ್ಲಿ ಮೊದಲ ಮತದಾನ (Voting) ಮಾಡಿ ಮದುವೆಗೆ ತೆರಳಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ.
ಕುಂದೂರು ಸಮೀಪದ ತಳವಾರ ಗ್ರಾಮದ ಸುಮಿಕ್ಷಾ ಎಂಬ ಯುವತಿಯ ಮದುವೆ (Marriage) ಕೊಪ್ಪ ಮೂಲದ ಸಂಜಯ್ ಎಂಬವರೊಂದಿಗೆ ನಿಶ್ಚಯವಾಗಿತ್ತು. ಇಂದೇ ಮದುವೆ ನಿಗದಿಯಾಗಿದ್ದ ಕಾರಣ ಮದುವೆ ಮಂಟಪಕ್ಕೆ ತೆರಳುವ ಮುನ್ನ ಮದುಮಗಳಾಗಿ ಅಲಂಕಾರಗೊಂಡ ಯುವತಿ ಮೊದಲ ಮತದಾನ ಮಾಡಿ ಬಳಿಕ ಮದುವೆ ಮಂಟಪಕ್ಕೆ ತೆರಳಿದ್ದಾರೆ. ಮೂಡಿಗೆರೆ ಪಟ್ಟಣದ ಪ್ರೀತಂ ಹಾಲ್‌ನಲ್ಲಿ ಮದುವೆ ನಡೆಯಲಿದೆ. ಇದನ್ನೂ ಓದಿ: ಕಡ್ಡಾಯ ಮತದಾನ ಕಾನೂನು ತರಬೇಕು: ಸಿದ್ದಗಂಗಾ ಶ್ರೀ ಆಗ್ರಹ
Advertisement
Advertisement
ಯುವತಿ ಕುಂದೂರು ಗ್ರಾಮದ ಬೂತ್ ನಂಬರ್ 86ರಲ್ಲಿ ಮತದಾನ ಮಾಡಿದ್ದಾರೆ. ಇದೇ ವೇಳೆ ದೇಶದ ಭದ್ರತೆಯ ರಕ್ಷಣೆಗಾಗಿ ಸುಭದ್ರತೆಯ ಸರ್ಕಾರ ನಿರ್ಮಾಣ ಮಾಡಲು ಮತದಾನ ಅತ್ಯಂತ ಮುಖ್ಯ ಎಂದು ಮದುಮಗಳ ಜೊತೆ ಆಕೆಯ 11 ಕುಟುಂಬಸ್ಥರು ಏಕಕಾಲದಲ್ಲಿ ಮತದಾನ ಮಾಡಿದ್ದಾರೆ. ಮದುಮಗಳಾಗಿ ಮತದಾನಕ್ಕೆ ಬಂದ ಯುವತಿ ಸುಮಿಕ್ಷಾ ಅವರಿಗೆ ಇತರೆ ಮತದಾರರು ಹಾಗೂ ಚುನಾವಣಾ ಸಿಬ್ಬಂದಿ ಕೂಡ ಶುಭಕೋರಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ : ತುಷಾರ್ ಗಿರಿನಾಥ್
Advertisement