ನವದೆಹಲಿ: ಪಾಕಿಸ್ತಾನದ ಬಾಲಕೋಟ್‍ನಲ್ಲಿ ಏರ್‌ಸ್ಟ್ರೈಕ್ ನಡೆಸಿ ಇಂದಿಗೆ ಒಂದು ವರ್ಷ ಕಳೆದಿದೆ. ಕಳೆದ ವರ್ಷ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ವಾಹನದ ಮೇಲೆ ಪಾಕ್ ಉಗ್ರ ಸಂಘಟನೆ ಜೈಷ್-ಎ-ಮೊಹಮ್ಮದ್ ನಡೆಸಿದ್ದ ದಾಳಿಗೆ ಪ್ರತೀಕಾರವಾಗಿ ಬಾಲಾಕೋಟ್ ಉಗ್ರ ಶಿಬಿರದ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿತ್ತು. ಇದನ್ನೂ ಓದಿ: ಬಾಲಾಕೋಟ್ ಏರ್ ಸ್ಟ್ರೈಕ್‍ನಲ್ಲಿ ನೂರಕ್ಕೂ ಅಧಿಕ ಉಗ್ರರು ಬಲಿ – ಮೃತದೇಹವನ್ನು ನದಿಗೆ ಎಸೆದಿದ್ದ ಪಾಕ್
Advertisement
ಪುಲ್ವಾಮಾ ದಾಳಿ ನಡೆದ 12ನೇ ದಿನಕ್ಕೆ ಪಾಕ್‍ಗೆ ತಕ್ಕ ಉತ್ತರ ನೀಡಲು ನಿರ್ಧರಿಸಿದ ಭಾರತ ಕಳೆದ ವರ್ಷ ಇದೇ ದಿನ ನಸುಕಿನ ಜಾವ, ಬಾಲಾಕೋಟ್‍ನಲ್ಲಿದ್ದ ಜೈಷ್ ಉಗ್ರರ ತರಬೇತಿ ಕೇಂದ್ರಗಳ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಗಡಿ ನಿಯಂತ್ರಣ ರೇಖೆ ದಾಟಿ ಸುಮಾರು 85 ಕಿ.ಮೀ. ಒಳನುಗ್ಗಿದ್ದ 12 ಮಿರಾಜ್-2000 ಯುದ್ಧ ವಿಮಾನಗಳು ಜೈಷ್‍ನ ತರಬೇತಿ ಕೇಂದ್ರಗಳ ಮೇಲೆ ಅತ್ಯಾಧುನಿಕ ಬಾಂಬ್‍ಗಳನ್ನು ಹಾಕಿ ಸಂಪೂರ್ಣ ನಾಶ ಮಾಡಿದ್ದವು. ನಸುಕಿನ ಜಾವ 3.30ರಿಂದ 3.55ರ ಅವಧಿಯಲ್ಲಿ ನಡೆದ ಈ ದಾಳಿಯಲ್ಲಿ ಸುಮಾರು 300 ಉಗ್ರರನ್ನು ಹೊಡೆದು ಹಾಕಲಾಗಿತ್ತು. ಆದರೆ ಪಾಕಿಸ್ತಾನ ತನ್ನ ಉಗ್ರ ಪೋಷಣೆಯನ್ನು ಮುಚ್ಚಿಕೊಳ್ಳಲು ದಾಳಿಯನ್ನು ಅಲ್ಲಗಳೆದಿತ್ತು. ಯಾವುದೇ ದಾಳಿಗಳು ನಡೆದಿಲ್ಲ ಎಂದು ಹೇಳಿಕೊಂಡಿತ್ತು. ಇದಾದ ಬಳಿಕ ಪಾಕಿಸ್ತಾನ ಮತ್ತು ಭಾರತದ ನಡುವೆ ಕೆಲ ದಿನಗಳ ಕಾಲ ಯುದ್ಧದ ಕಾರ್ಮೋಡ ನಿರ್ಮಾಣವಾಗಿತ್ತು. ಇದನ್ನೂ ಓದಿ: ಭಾರತಕ್ಕಿಂದು ಕರಾಳ ದಿನ – ಪುಲ್ವಾಮಾ ದಾಳಿಗೆ 1 ವರ್ಷ
Advertisement
Advertisement
ಬಾಲಕೋಟ್ ದಾಳಿಗೆ ಪ್ರತಿಯಾಗಿ ಪಾಕ್ ತನ್ನ ಮೂರು ಎಫ್-16 ಯುದ್ಧ ವಿಮಾನಗಳ ಮೂಲಕ ಭಾರತ ಮೇಲೆ ದಾಳಿ ನಡೆಸಲು ಮುಂದಾಗಿತ್ತು. ಈ ವೇಳೆ ಪಾಕ್‍ನ ವಿಮಾನಗಳು ಭಾರತ ಗಡಿದಾಟಿ ಒಳಗೆ ಬಂದಿದ್ದವು. ತಕ್ಷಣ ಭಾರತದ ಕಡೆಯಿಂದ ಮಿಗ್-21 ವಿಮಾನಗಳು ಪಾಕ್ ವಿಮಾನಗಳನ್ನು ಹಿಮ್ಮೆಟ್ಟಿಸಲು ಮುಗಿಬಿದ್ದವು. ಈ ವೇಳೆ ಮಿಗ್-21 ವಿಮಾನದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್, ಪಾಕ್‍ನ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದರು. ಈ ವೇಳೆ ಅವರ ವಿಮಾನ ಅಪಘಾಕ್ಕೀಡಾಗಿತ್ತು. ನಂತರ ಪಾಕ್ ಸೇನೆ ಅವರನ್ನು ವಶಕ್ಕೆ ಪಡೆದಿತ್ತು. ಭಾರತ ಹಾಗೂ ಜಾಗತಿಕ ಮಟ್ಟದ ಒತ್ತಡಕ್ಕೆ ಮಣಿದ ಪಾಕ್ ಅಭಿನಂದನ್ ಅವರನ್ನು ಭಾರತಕ್ಕೆ ಹಸ್ತಾಂತರಿಸಿತು. ಇದನ್ನೂ ಓದಿ: ರಾತ್ರಿ ವಿಮಾನಗಳ ಶಬ್ಧ ಹೆಚ್ಚಿತ್ತು, ದಿಢೀರ್ ಒಂದು ಶಬ್ಧ ಬಂತು – ಬಾಲಕೋಟ್ ನಿವಾಸಿಗಳ ಪ್ರತಿಕ್ರಿಯೆ