ಉಡುಪಿ: ಇಲ್ಲಿನ (Udupi) ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ (National Highways Authority) ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರನ್ನು ಮೀನುಗಾರರ ಮುಖಂಡರು (Fishermen Leaders) ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ.
Advertisement
ಮಲ್ಪೆ – ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಚಾರದಲ್ಲಿ ಮೀನುಗಾರರ ಮುಖಂಡ ಕಿಶೋರ್ ಡಿ.ಸುವರ್ಣ ತಕರಾರು ತೆಗೆದಿದ್ದಾರೆ. ಈ ವೇಳೆ ಸರ್ವಋತು ಮಲ್ಪೆ ಬಂದರಿನ ಬಗ್ಗೆ ನಿಮಗೆ ನಿರ್ಲಕ್ಷ್ಯ ಏಕೆ? ಮಲ್ಪೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕ ರೀತಿಯಲ್ಲಿಲ್ಲ. ರಸ್ತೆಯ ಸರ್ವೆ, ಪರಿಹಾರದ ಬಗ್ಗೆ ಜನರಿಗೆ ಗೊಂದಲಗಳಿವೆ. ಭೂಮಿಯ ಪರಿಹಾರ ಕಾರ್ಯ ಕೂಡ ವೈಜ್ಞಾನಿಕವಾಗಿ ನಡೆದಿಲ್ಲ. ಕೋಟ್ಯಂತರ ಆದಾಯ ಇರುವ ಈ ರಸ್ತೆ ಪರಿಹಾರಕ್ಕೆ ಕೇವಲ 50 ಕೋಟಿ ರೂ. ಕೊಡಲು ಹಿಂದೇಟು ಏಕೆ? ಎಂದು ಸಚಿವೆಯನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಮ್ಮ ಹೊಟ್ಟೆ ಹಸಿಯುವಂತೆ ಮಾಡಿ ಉತ್ತರ ಪ್ರದೇಶಕ್ಕೆ ಅನುದಾನ ಕೊಡಬೇಡಿ: ಕೇಂದ್ರಕ್ಕೆ ಸಿಎಂ ಚಾಟಿ
Advertisement
Advertisement
ಅಲ್ಲದೇ ನಾವು ನಿಮ್ಮ ಮೇಲೆ ವಿಶ್ವಾಸ ಇಟ್ಟು ಮತ ಹಾಕಿ ಗೆಲ್ಲಿಸಿದ್ದೇವೆ. ನೀವು ನಮ್ಮ ಮೇಲೆ ಯಾಕೆ ವಿಶ್ವಾಸ ಇಟ್ಟಿಲ್ಲ? ನಿಮಗೆ 10 ವರ್ಷಗಳಿಂದ ಮತ ಹಾಕಿದ್ದಕ್ಕೆ ನೀವು ನಮಗೆ ಏನು ಮಾಡಿದ್ದೀರಿ? ರಸ್ತೆಗೆ ಭೂಮಿ ಕಳೆದುಕೊಳ್ಳುವವರನ್ನು ಸೇರಿಸಿ ಈವರೆಗೆ ಒಂದೇ ಒಂದು ಸಭೆ ಕರೆದಿಲ್ಲ ಎಂದು ಮನವಿ ನೀಡಲು ಬಂದ ಮೀನುಗಾರರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನವರ ಬಜೆಟ್‌ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು?
Advertisement