ಮಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿದ ಮೀನುಗಾರರ ಸಾಲಮನ್ನಾ ಯೋಜನೆಯಡಿ 23 ಸಾವಿರ ಜನ ಫಲಾನುಭವಿಗಳಿಗೆ 60 ಕೋಟಿ ರೂಪಾಯಿಯನ್ನು ರಾಜ್ಯ ಹಣಕಾಸು ಇಲಾಖೆ ಅಧಿಕೃತವಾಗಿ ಬಿಡುಗಡೆ ಮಾಡಿದೆ ಎಂದು ರಾಜ್ಯ ಮೀನುಗಾರಿಕೆಗೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಾಲಮನ್ನಾದ ಹಣ ಭೂಮಿ ಕೋಶದ ಮೂಲಕ ಸಾಲಗಾರರ ಖಾತೆಗೆ ಜಮಾ ಮಾಡಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Advertisement
Advertisement
ಕೊರೊನದ ಸಂಕಷ್ಟದ ದಿನಗಳಲ್ಲೂ ಕೂಡ ಮೀನುಗಾರರ ಹಿತರಕ್ಷಣೆಗಾಗಿ 60 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹಾಗೂ ಸಹಕಾರ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರಿಗೆ ರಾಜ್ಯದ ಸಮಸ್ತ ಮೀನುಗಾರರ ಪರವಾಗಿ ರಾಜ್ಯ ಮೀನುಗಾರಿಕೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಧನ್ಯವಾದಗಳನ್ನು ತಿಳಿಸಿದ್ದಾರೆ.