ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ (Fishing Boat) ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರು (Mangaluru) ಹೊರವಲಯದ ಸುರತ್ಕಲ್ (Surathkal) ಬಳಿ ನಡೆದಿದೆ.
ದೋಣಿ ಉಡುಪಿಯ ಮಲ್ಪೆ ಬಂದರಿನಿಂದ (Malpe Port) ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ 6 ಮಂದಿ ಮೀನುಗಾರರಿದ್ದರು. ಮೀನುಗಾರಿಕೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಪಲ್ಟಿಯಾಗಿದೆ. ಇದನ್ನೂ ಓದಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತನ ಭೀಕರ ಹತ್ಯೆ
ದೋಣಿ ಪಲ್ಟಿಯಾದ ರಭಸಕ್ಕೆ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ವೇಳೆ ಸ್ಥಳೀಯ ಮೀನುಗಾರರು ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಭಾರಿ ಮಳೆಗೆ ಗೋಕರ್ಣದಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರ ಬಂದ್
