ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿ (Boat Sinks) ಏಳು ಜನ ಮೀನುಗಾರರನ್ನ (Fishermen) ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ (Honnavara) ತಾಲೂಕಿನ ತಾರೇಬಾಗಿಲು ಸಮೀಪದ ಸಮುದ್ರದಲ್ಲಿ ನಡೆದಿದೆ.
ಅಂಕೋಲದ ಬೆಳಂಬಾರ ಕಡಲತೀರದಿಂದ ಮೀನುಗಾರಿಕೆಗೆ ಹೊರಟಿದ್ದ ಮಂಜುನಾಥ್ ಕಾರ್ವಿ ಎಂಬವರ ಮಾಲೀಕತ್ವದ ಶ್ರೀ ನವರತ್ನ ಹೆಸರಿನ ಬೋಟ್ ಹೊನ್ನಾವರದ ತಾರೇಬಾಗಿಲು ಸಮೀಪ ಮೀನುಗಾರಿಕೆ ನಡೆಸುವಾಗ ಬೋಟಿನ ಹೊರಭಾಗಕ್ಕೆ ಹಾನಿಯಾದ್ದರಿಂದ ಬೋಟ್ ಒಳಗೆ ನೀರು ತುಂಬಿ ಮುಳುಗಡೆಯಾಗಿದೆ. ತಕ್ಷಣ ಸ್ಥಳೀಯ ಮೀನುಗಾರಿಕಾ ಬೋಟ್‌ನ ಇಕ್ಬಾಲ್ ಅಬ್ದುಲ್ ಗಫೂರ್ ಎಂಬುವವರು ತಮ್ಮ ಬೋಟ್‌ನಿಂದ ಏಳುಜನ ಮೀನುಗಾರರ ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಅಭಿಷೇಕ್ ಬ್ಯಾನರ್ಜಿ ಬಳಿಕ ಟಿಎಂಸಿ ಸಂಸದರ ಮೇಲೂ ದಾಳಿ – ಕಲ್ಯಾಣ್ ಬ್ಯಾನರ್ಜಿ ತಲೆಗೆ ಗಂಭೀರ ಪೆಟ್ಟು
ವೆಂಕಟೇಶ್ ಖಾರ್ವಿ, ನಾಗಪ್ಪ ಖಾರ್ವಿ, ಸಂದೀಪ್ ಖಾರ್ವಿ, ವಿಕಾಸ್ ಖಾರ್ವಿ, ವಿಘ್ನೇಶ್ ಖಾರ್ವಿ, ರಜತ್ ಬಾಣಾವಳಿಕರ್ ಹಾಗೂ ಲತೇಶ್ ಖಾರ್ವಿ ಎಂಬ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಬೋಟ್ ಮುಳುಗಡೆಯಿಂದ ಅಂದಾಜು 50 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ಘಟನೆ ಸಂಬಂಧ ಹೊನ್ನಾವರ ಸಿಎಸ್‌ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಭಿ ದೇಹದಲ್ಲಿ ರಕ್ತ ಹೆಪ್ಪುಗಟ್ಟಿದೆ, ಮನೆಯಲ್ಲೇ ಚಿಕಿತ್ಸೆ ಕೊಡಿಸಲಾಗ್ತಿದೆ – ನನ್ನ ಅಳಿಯನ ಕೊಲೆಗೆ ಬಿಜೆಪಿ ಸಂಚು: ದೀದಿ ಗಂಭೀರ ಆರೋಪ
